ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ

28blrp2
ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಸಭೆ ನಡೆಸಿ ಚರ್ಚಿಸಿದರು. ತೀರ್ಥಂಕರ್, ಬೋಗ ಮಲ್ಲೇಶ್, ಎಸ್.ಎಂ.ರಾಜು, ರಾಜೇಗೌಡ, ಶಿವಮೂರ್ತಿ, ಹೆಬ್ಬಾಳು ಹಾಲಪ್ಪ, ವಾಸುದೇವ ಧನ್ಯ ಇತರರಿದ್ದರು.
Published on


ಬೇಲೂರು: ಕಾವೇರಿ ನೀರಿನ ವಿಚಾರವಾಗಿ ಸೆ.29ರ ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಕಟ ಬಂದ್ ಬೇಲೂರಿನಲ್ಲಿ ತಾಲೂಕಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬೆಂಬಲ ವ್ಯಕ್ತಪಡಿಸಿ ಬಂದ್ ಯಶಸ್ಸಿಗೆ ಮನವಿ ಮಾಡಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡಪರ ಹಾಗೂ ರೈತ ಸಂಘ, ಕಸಾಪ, ಜಯ ಕರ್ನಾಟಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಮುಂಖಂಡರು ಚರ್ಚಿಸಿ ಬಂದ್ ರೂಪುರೇಷೆಗಳ ಕುರಿತು ಚರ್ಚಿಸಿದರು.

ಡಾ.ರಾಜ್‌ಕುಮಾರ್ ಸಂಘದ ಅಧ್ಯಕ್ಷ ತೀರ್ಥಂಕರ್ ಮಾತನಾಡಿ, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಕರ್ನಾಟಕ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಹಲವಾರು ಸಂಘಟನೆಗಳು ಮುಂದಾಗಿವೆ. ಯಾವುದೇ ಅಹಿತಕರ ಘಟನೆಗಳಿಗೂ ಅವಕಶವಾಗದಂತೆ ಪ್ರತಿಭಟನೆ ಮೂಲಕ ಬಂದ್ ಯಶಸ್ಸಿಗೆ ತಾಲೂಕಿನ ಹಾಗೂ ಪಟ್ಟಣದ ವರ್ತಕರು, ಸಾರ್ವಜನಿಕರು, ವಿವಿಧ ವಾಹನಗಳ ಮಾಲೀಕರು ಮತ್ತು ಚಾಲಕರು ಸೇರಿದಂತೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು.

ರೈತ ಸಂಘದ ಅಧ್ಯಕ್ಷ ಬೋಗ ಮಲ್ಲೇಶ್, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಎಸ್.ಎಂ.ರಾಜು, ಕಸಾಪ ಅಧ್ಯಕ್ಷ ರಾಜೇಗೌಡ, ಮಾಜಿ ಅಧ್ಯಕ್ಷ ಶಿವಮೂರ್ತಿ, ಪತ್ರಕರ್ತರ ಸಂಘದ ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ವರ್ತಕರ ಸಂಘದ ವಾಸುದೇವ ಧನ್ಯ, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೇಶವಮೂರ್ತಿ, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಆರಾಧ್ಯ, ಕರವೇ(ಪ್ರವೀಣ್‌ಶೆಟ್ಟಿ)ಬಣದ ಕಾರ್ಯದರ್ಶಿ ಜಯಪ್ರಕಾಶ್, ಜಯ ಕರ್ನಾಟಕ ಸಂಘಟನೆ ಕಾರ್ಯಾಧ್ಯಕ್ಷ ಲಕ್ಷ್ಮಣ್, ಗೌರವಾಧ್ಯಕ್ಷ ಅರುಣ್ ಕುಮಾರ್, ಮಾನವ ಹಕ್ಕು ಆಯೋಗದ ಅಧ್ಯಕ್ಷ ನಿಂಗರಾಜು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net