

ಮಂಗಳೂರು: ನರೇಂದ್ರ ಮೋದಿ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಬಹಳ ದಿನಗಳ ಬಳಿಕ ಪ್ರಧಾನಿಯವರು ಕರ್ನಾಟಕದ ಕರಾವಳಿಗೆ ಆಗಮಿಸುತ್ತಿದ್ದಾರೆ. ಅವರನ್ನು ಭವ್ಯವಾಗಿ ಸ್ವಾಗತಿಸುವುದು ನಮ್ಮ ಕರ್ತವ್ಯ ಎಂದರು.
3,800 ಕೋಟಿ ರೂ. ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದು, ಇದರಿಂದ ಕರಾವಳಿಯ ಸಮಗ್ರ ಅಭಿವೃದ್ಧಿಯಾಗಲಿದೆ. ಇಲ್ಲಿನ ಯುವಕರಿಗೆ ಹೆಚ್ಚು ಉದ್ಯೋಗಾವಕಾಶ ದೊರಕಲಿದೆ ಎಂದರು.
ಸೆ.8ಕ್ಕೆ ಜನೋತ್ಸವ ನಡೆಯಲಿದೆ. ಹಲವು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.