

ನಂಜನಗೂಡು: ಪಟ್ಟಣದ ದೇವಿರಮ್ಮನಹಳ್ಳಿ ಗ್ರಾಮದಲ್ಲಿರುವ ಶ್ರೀ ಶರಣ ಸಂಗಮ ಮಠದಲ್ಲಿ ಭಾನುವಾರ ಭಾರಿ ಗಾತ್ರದ ನಾಗರಹಾವನ್ನು ರಕ್ಷಣೆ ಮಾಡಲಾಯಿತು.
ಮಠದಲ್ಲಿ ನಾಗರಹಾವು ಪ್ರತ್ಯಕ್ಷವಾಗಿದ್ದರಿಂದ ಶ್ರೀ ನಾಗರಾಜೇಂದ್ರ ಸ್ವಾಮೀಜಿ ಅವರು ವನ್ಯಜೀವಿ ಸಂರಕ್ಷಕ ಗೋಳೂರು ಸ್ನೇಕ್ ಬಸವರಾಜ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬಸವರಾಜ್ ನಾಗರಹಾವನ್ನು ಹಿಡಿದು ಪ್ಲಾಸ್ಟಿಕ್ ಡಬ್ಬದಲ್ಲಿ ಇರಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ನಾಗರಹಾವು ಮಠದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸ್ವಾಮೀಜಿ ಪೂಜೆ ಸಲ್ಲಿಸಿದರು.