

ಲಕ್ಷ್ಮೇಶ್ವರ: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಪಟ್ಟಣ, ಸುತ್ತ್ತಲಿನ ಊರುಗಳಲ್ಲಿ ಮುಸ್ಲಿಮರು ಸೋಮವಾರ ಶ್ರದ್ಧೆಯಿಂದ ಆಚರಿಸಿದರು. ಇಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಸಮಾಜದವರು ಪ್ರಾರ್ಥನೆಯಲ್ಲಿ ತೊಡಗಿದ್ದರು. ಧಾನ, ಧರ್ಮದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬವನ್ನು ತಾಲೂಕಿನ ಬಹುತೇಕ ಗ್ರಾಮಗಳಲ್ಲಿಯೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಬಕ್ರೀದ್ ಪ್ರಯುಕ್ತ ಮುಸ್ಲಿಮರು ಹೊಸಬಟ್ಟೆ ತೊಟ್ಟು ಸಂಭ್ರಮದಿಂದ ಈದ್ಗಾ ಮೈದಾನಕ್ಕೆ ಆಗಮಿಸಿದ್ದರು. ಮಕ್ಕಳೂ ಉತ್ಸಾಹದಿಂದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಸಾಮೂಹಿಕ ಪ್ರಾರ್ಥನೆ ಬಳಿಕ ಧರ್ಮಗುರುಗಳು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲ ಸಮಾಜಗಳೊಂದಿಗೆ ಸಹೋದರತ್ವ, ಸಹಬಾಳ್ವೆಯಿಂದ ಬಾಳುವುದು ಇಂದಿನ ಅಗತ್ಯವಾಗಿದೆ ಎಂದು ನುಡಿದರು.