ಮುಂದಿನ ವಾರ ರಾಜ್ಯದಲ್ಲಿ ಚಳಿ ಹೆಚ್ಚಳ: ಹವಾಮಾನ ಇಲಾಖೆ ಮೂನ್ಸೂಚನೆ

Cold
Published on

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಚಳಿಗೆ ಜನರು ತತ್ತರಿಸುತ್ತಿರುವ ನಡುವಯೇ ಮುಂದಿನ ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿಯ ತೀವ್ರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡ, ವಿಜಯಪುರ, ಗದಗ, ಹಾವೇರಿ ಹಾಗೂ ದಾವಣಗೆರೆ ಮತ್ತಿತರ ಜಿಲ್ಲೆಗಳ ಕನಿಷ್ಠ ತಾಪಮಾನವು ಮುಂದಿನ ವಾರ 10 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಲಿದ್ದು, ಚಳಿಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಆದ್ದರಿಂದ, ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.

ಅಲ್ಲದೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ. ದೆಹಲಿಯಲ್ಲಿ ಈಗಾಗಲೇ ಕನಿಷ್ಠ ತಾಪಮಾನವು 8.5 ಡಿಗ್ರಿ ಸೆಲ್ಸಿಯಸ್‌ಯಿದೆ. ಲಾ ನಿನೊ ಪರಿಣಾಮದಿಂದ ಈ ಬಾರಿ ಹೆಚ್ಚು ಚಳಿ ಉಂಟಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net