

ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಪಿಜಕ್ಕಳ ಗೊಡಾಲು ನಿವಾಸಿ ಯತೀಂದ್ರ ಗೌಡ(48) ಭಾನುವಾರ ಮೃತಪಟ್ಟಿದ್ದಾರೆ. ಶನಿವಾರ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಅವರನ್ನು ಕಡಬದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.