ಶೇಖಮಲೆಯಲ್ಲಿ ಕೊಚ್ಚಿಹೋದ ಮೋರಿ

ashok rai
ಶೇಖಮಲೆಯಲ್ಲಿ ಮೋರಿ ಮಳೆನೀರಿನೊಂದಿಗೆ ಕೊಚ್ಚಿಕೊಂಡು ಹೋಗಿದ್ದು, ಸ್ಥಳಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ಪುತ್ತೂರು ಗ್ರಾಮಾಂತರ: ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಖಮಲೆ ದಲಿತ ಕಾಲೋನಿ ಸಂಪರ್ಕದ ರಸ್ತೆಯಲ್ಲಿನ ಮೋರಿ ಭಾಗ ಕುಸಿತಕ್ಕೊಳಗಾಗಿ ಮೋರಿ ಮಳೆನೀರಿನೊಂದಿಗೆ ಕೊಚ್ಚಿಕೊಂಡು ಹೋಗಿದ್ದು, ಅಲ್ಲಿನ ಮಂದಿಗೆ ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆಯಿಂದ ದಲಿತ ಕಾಲೋನಿಗೆ ಹೋಗುವ ರಸ್ತೆಯಲ್ಲಿ ತೋಡಿನ ಬದಿಯಲ್ಲಿ ಅಳವಡಿಸಲಾಗಿದ್ದ ಮೋರಿಯ ಭಾಗ ಕುಸಿತಕ್ಕೊಳಗಾಗಿ ಮುಕ್ಕಾಲು ರಸ್ತೆ ಭಾಗ ಆಳಕ್ಕೆ ಕುಸಿದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net