ಕೊಡಗು ರೆಡ್ ಕ್ರಾಸ್‌ಗೆ ಜಿಲ್ಲಾಧಿಕಾರಿ ಅಭಿನಂದನೆ

dc abinandane
Published on

ಮಡಿಕೇರಿ: ವಿವಿಧ ಸೇವಾ ಯೋಜನೆಗಳಿಗಾಗಿ ರಾಜ್ಯದಲ್ಲಿಯೇ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ರಾಜ್ಯಪಾಲರಿಂದ ಪ್ರಶಸ್ತಿಗೆ ಪಾತ್ರವಾದ ಕೊಡಗು ಜಿಲ್ಲಾ ರೆಡ್ ಕ್ರಾಸ್ ಘಟಕಕ್ಕೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅಭಿನಂದನೆ ಸಲ್ಲಿಸಿದ್ದಾರೆ.


ಭಾರತೀಯ ರೆಡ್ ಕ್ರಾಸ್‌ನ ಕೊಡಗು ಜಿಲ್ಲಾ ಘಟಕವನ್ನು ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಇತ್ತೀಚಿಗೆ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈರವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದರು.


ಈ ಹಿನ್ನೆಲೆಯಲ್ಲಿ ಕೊಡಗು ರೆಡ್ ಕ್ರಾಸ್ ವತಿಯಿಂದ ಕಾರ್ಯಯೋಜನೆಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ರೆಡ್ ಕ್ರಾಸ್ ಜಿಲ್ಲಾ ಸಭಾಧ್ಯಕ್ಷ ಜಿಲಾಧಿಕಾರಿ ವೆಂಕಟರಾಜರವರಿಗೆ ಧನ್ಯವಾದ ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ರೆಡ್ ಕ್ರಾಸ್‌ನ ಸಾಧನೆಗಳಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿಯೂ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವನ್ನು ರೆಡ್ ಕ್ರಾಸ್‌ನ ಜನಪರ ಕಾರ್ಯಕ್ರಮಗಳಿಗೆ ನೀಡುವುದಾಗಿ ಭರವಸೆ ನೀಡಿದರು.


ಕೊಡಗು ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ಉಪಾಧ್ಯಕ್ಷ ಎಚ್.ಟಿ.ಅನಿಲ್, ಪ್ರಧಾನ ಕಾರ್ಯದರ್ಶಿ ಎಚ್.ಆರ್.ಮುರಳೀಧರ್, ನಿರ್ದೇಶಕರಾದ ಎಂ.ಧನಂಜಯ್, ಸತೀಶ್ ರೈ, ವಿಜಯ್ ಶೆಟ್ಟಿ, ಶರತ್ ಶೆಟ್ಟಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net