ಜಿಲ್ಲಾಧಿಕಾರಿಗೆ ದ.ಕ. ಜಿಲ್ಲಾ ಕಸಾಪ ಅಭಿನಂದನೆ

ka sa apa
ದ.ಕ. ಜಿಲ್ಲಾ ಕಸಾಪ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಅಭಿನಂದಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ, ಸಂಘಟನಾ ಕಾರ್ಯದರ್ಶಿ ಜಗದೀಶ ಯಡಪಡಿತ್ತಾಯ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಸನತ್ ಕುಮಾರ್ ಜೈನ್ ಉಪಸ್ಥಿತರಿದ್ದರು.
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಅಭಿನಂದಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಸಾಹಿತ್ಯ ಕಾರ್ಯಕ್ರಮಗಳ ವಿವರಗಳನ್ನು ಅವರಿಗೆ ನೀಡಲಾಯಿತು. ಜಿಲ್ಲಾಡಳಿತ ವತಿಯಿಂದ ಪೂರ್ಣ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿ, ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಾಣದ ಬಗ್ಗೆ ಬೇಡಿಕೆ ಸಲ್ಲಿಸಿದಾಗ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಅರ್ಜಿಯನ್ನು ಅವರಿಗೆ ನೀಡಲಾಯಿತು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ, ಸಂಘಟನಾ ಕಾರ್ಯದರ್ಶಿ ಜಗದೀಶ ಯಡಪಡಿತ್ತಾಯ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಸನತ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net