ವರದಿ ಆಧರಿಸಿ ಬರ ಘೋಷಿಸಲಿರುವ ಸರ್ಕಾರ; ಡಿಸಿ ನಲಿನ್ ಅತುಲ್ ಹೇಳಿಕೆ

GROUND TRUTING SURVEY
ಹನುಮಸಾಗರ ಸಮೀಪದ ಯರಗೇರಾದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ನೇತೃತ್ವದ ತಂಡ ಬೆಳೆಗಳ ಸಮೀಕ್ಷೆ ನಡೆಸಿತು. ತಹಸೀಲ್ದಾರ್ ಶ್ರುತಿ ಎಂ., ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ, ಕಂದಾಯ ನಿರೀಕ್ಷಕರಾದ ಅಬ್ದುಲ್ ರಜಾಕ್ ಮದ್ದಲಗಟ್ಟಿ, ಗ್ರಾಮ ಲೆಕ್ಕಾಧಿಕಾರಿ ರವಿ ಮದನ ಇತರರಿದ್ದರು.
Published on

ಹನುಮಸಾಗರ: ಸಮೀಪದ ಯರಗೇರಾ ಗ್ರಾಮಕ್ಕೆ ಮಂಗಳವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಭೇಟಿ ನೀಡಿ ಬೆಳೆ ಸಮಿಕ್ಷೆ ನಡೆಸಿತು.

ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಅದಕ್ಕಾಗಿ ಸರ್ಕಾರ ಗ್ರೌಂಡ್ ಟ್ರೂಥಿಂಗ್ ಸರ್ವೇ ಮಾಡುತ್ತಿದ್ದು, ಇದರಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಅನೇಕ ಗ್ರಾಮಗಳಲ್ಲಿ ರ‌್ಯಾಂಡಮ್ ಡಿಜಿಟಲ್ ಸರ್ವೇ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಕೊಡಲಾಗುತ್ತದೆ. ಸರ್ಕಾರ ಈ ವರದಿ ಆಧರಿಸಿ ಬರ ಘೋಷಣೆ ಮಾಡಲಿದೆ ಎಂದರು.

ತಹಸೀಲ್ದಾರ್ ಶ್ರುತಿ ಎಂ., ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ, ಕಂದಾಯ ನಿರೀಕ್ಷಕರಾದ ಅಬ್ದುಲ್ ರಜಾಕ್ ಮದ್ದಲಗಟ್ಟಿ, ಗ್ರಾಮ ಲೆಕ್ಕಾಧಿಕಾರಿ ರವಿ ಮದನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net