ಮದ್ದೂರು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

07M.D.R.3
ಜಿಲ್ಲಾಧಿಕಾರಿ ಡಾ.ಕುಮಾರ ಮದ್ದೂರು ಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮಶೇಖರ್, ಸಿ.ಎಚ್.ಕಾಳೀರಯ್ಯ ಇದ್ದರು.
Published on

ಮದ್ದೂರು: ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕು ಕಚೇರಿಯ ವಿವಿಧ ವಿಭಾಗಗಳಿಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಾರ್ವಜನಿಕರ ಹಾಗೂ ರೈತರ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು. ಅನಗತ್ಯವಾಗಿ ಕಚೇರಿಗೆ ಅಲೆಸಬಾರದು ಎಂದು ತಾಕೀತು ಮಾಡಿದರು. ಈ ವೇಳೆ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿ, ಅರ್ಜಿ ಸ್ವೀಕರಿಸಿದರು. ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಕೆ.ಎಸ್.ಸೋಮಶೇಖರ್, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಬಿಇಒ ಸಿ.ಎಚ್.ಕಾಳೀರಯ್ಯ ಇದ್ದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇತ್ತೀಚೆಗೆ ತಾಲೂಕು ಕಚೇರಿ ಮತ್ತು ಉಪ ನೋಂದಣಿ ಕಚೇರಿ ಆಗಮಿಸಿ ಪರಿಶೀಲನೆ ನಡೆಸಿ ಸಮರ್ಪಕವಾಗಿ ಸಾರ್ವಜನಿಕರ ಕೆಲಸವಾಗುತ್ತಿಲ್ಲ ಎಂಬ ಬಗ್ಗೆ ಅಸಮಾಧಾನ ಹೊರಹಾಕಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net