

ಕುಶಾಲನಗರ:
ಇಲ್ಲಿನ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೇಂಜರ್ಸ್, ರೋವರ್ಸ್ ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಸ್ಚಚ್ಛ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಬೆಂಬಲ ನೀಡಿ ಬುಧವಾ ಶ್ರಮದಾನ ಮಾಡಲಾಯಿತು.
ಮೊದಲಿಗೆ ಕಾಲೇಜಿನ ಆವರಣದಲ್ಲಿ ಶ್ರಮದಾನ ಮಾಡಿದ ನಂತರ ಅಲ್ಲಿಂದ ಗೋಪಾಲ್ ಸರ್ಕಾಲ್ ತನಕ ಎರಡು ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕಸ ಕಡ್ಡಿಗಳನ್ನು ತೆಗೆಯುವುದರ ಮೂಲಕ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಬೆಂಬಲ ಸೂಚಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಪ್ರಭಾರ ಪ್ರಾಂಶುಪಾಲರಾದ ಕುಸುಮಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಬಿ.ಕೆ. ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕಿ ಡಾ.ಪಿ.ಪಿ. ಜಯಂತಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಆಯಿಶಾ ಸಿದ್ದಿಕ, ಉಪನ್ಯಾಸಕರಾದ ನಟರಾಜು, ಸಿದ್ದಾಪ್ಪಾಜಿ ಇತರರು ಇದ್ದರು.