ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳ ಪರದಾಟ

may 19 kottur 01
ಕೊಟ್ಟೂರಿನಲ್ಲಿ ವಿವಿಧ ಕಾಲೇಜುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮಳೆಯಿಂದಾಗಿ ನಿಂತ ನೀರಿನಲ್ಲಿ ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿರುವುದು.
Published on

ಕೊಟ್ಟೂರು: ಪಟ್ಟಣದ ಗೊರ್ಲಿ ಶರಣಪ್ಪ ಸರ್ಕಾರಿ ಪದವಿಪೂರ್ವ ಕಾಲೇಜ್ ಹಾಗೂ ಕೊಟ್ಟೂರೇಶ್ವರ ಮಹಾವಿದ್ಯಾಲಯಕ್ಕೆ ಹೋಗುವ ವಿದ್ಯಾರ್ಥಿಗಳು ಸಮರ್ಪಕ ರಸ್ತೆಯಿಲ್ಲದೆ ಪರದಾಡುತ್ತಿದ್ದಾರೆ. ರಸ್ತೆ ಮೇಲೆ ಮಳೆ ನೀರು ನಿಂತಿರುವುದರಿಂದ ಓಡಾಟಕ್ಕೆ ತೊಂದರೆಯಾಗಿದೆ.

ರಸ್ತೆಗೆ ಹೊಂದಿಕೊಂಡು ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ರಸ್ತೆ ಮೇಲೆ ನೀರು ನಿಲ್ಲುತ್ತಿದೆ. ಮಳೆ ನಿರಂತರ ಬಂದರೆ ವಿದ್ಯಾರ್ಥಿಗಳು ನಿರಂತರ ಪರದಾಡಬೇಕಾಗುತ್ತದೆ. ರಸ್ತೆ ಬದಿ ಮುಳ್ಳಿನ ಗಿಡಗಳು ಬೆಳೆದಿವೆ. ರಸ್ತೆ ಬದಿಯೇ ಸಾರ್ವಜನಿಕರು ಮಲ-ಮೂತ್ರ ವಿಸರ್ಜನೆ ಮಾಡುತ್ತಿರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿದೆ. ರಸ್ತೆ ತಗ್ಗುಗಳನ್ನು ಮುಚ್ಚಿ ಎಂದು ಪಪಂಗೆ ಅನೇಕ ಸಲ ಈ ಎರಡು ಕಾಲೇಜಿನ ಪ್ರಾಚಾರ್ಯರು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

ಗೊರ್ಲಿ ಶರಣಪ್ಪ ಸರ್ಕಾರಿ ಪ.ಪೂ.ಕಾಲೇಜ್ ಪ್ರಾಚಾರ್ಯ, ಕೊಟ್ಟೂರುಜಿ.ಸೋಮಶೇಖರ್ಕಾಲೇಜುಗಳಿಗೆ ಸಂಪರ್ಕ ಕಲ್ಪಿಸುವ ಮಖ್ಯರಸ್ತೆಯಲ್ಲಿ ಮಳೆ ಬಂದಾಗ ಅರ್ಧ ಅಡಿ ನೀರು ನಿಲ್ಲುತ್ತದೆ. ಇದೇ ನೀರಿನಲ್ಲಿ ನಡೆದುಕೊಂಡು ಬರುವಾಗ ಕೆಲ ವಿದ್ಯಾರ್ಥಿಗಳು ಜಾರಿ ಬಿದ್ದಿದ್ದಾರೆ. ರಸ್ತೆ ಬದಿ ಗಿಡ-ಗಂಟಿಗಳು ಬೆಳೆದಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ರಸ್ತೆ ನಿರ್ಮಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net