

ಹೂವಿನಹಡಗಲಿ: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲು ಆಗ್ರಹಿಸಿ ಅಖಿಲ ಕರ್ನಾಟಕ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಶಾಸಕ ಕೃಷ್ಣನಾಯ್ಕಗೆ ಬುಧವಾರ ಮನವಿ ಸಲ್ಲಿಸಿದರು.
ರಾಜ್ಯದ 17 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 15 ಸಾವಿರ ಮಾತ್ರ ನೀಡಲಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ಹಾಗಾಗಿ ಕಾಲಕ್ಕೆ ತಕ್ಕಂತೆ ವೇತನ ಪರಿಷ್ಕರಣೆ ಮಾಡಬೇಕು. ಜತೆಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಕೆಲಸ ಕೊಡಿಸುವುದಾಗಿ ವಂಚಿಸಿದ್ದವನ ಬಂಧನ
ಕಳೆದ ವರ್ಷ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆ. ಆದರೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಏರಿಕೆ ಮಾಡಿಲ್ಲ. ಇದು ಸರ್ಕಾರ ವೇತನ ತಾರತಮ್ಯ ಧೋರಣೆ ತೋರಿಸುತ್ತದೆ. ಅಲ್ಲದೆ ಕಳೆದ ಎಂಟು ತಿಂಗಳಿಂದ ವೇತನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಜಿ.ಬಿ.ಮನುಕುಮಾರ್, ಪ್ರಮುಖರಾದ ಕೊಟ್ರಬಸಪ್ಪ.ಬಿ, ಛತ್ರಿನಾಯ್ಕ, ನಾಜಿಯಾ.ಬಿ, ಪ್ರಿಯಾಂಕ.ಬಿ, ಅನುರಾಧ, ನಾಜಿಯಾ, ಆರ್.ರವಿನಾಯ್ಕ, ಎಂ.ದೇವರಾಜ, ವಾಣಿಶ್ರೀ ಇತರರಿದ್ದರು.