ಕಾಲೇಜು ಮಂಜೂರಾತಿಗೆ ಪ್ರಯತ್ನ

14Ckd1
Published on

ಚಿಕ್ಕೋಡಿ: ಕರಗಾಂವ ಗ್ರಾಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯೊಂದಿಗೆ ಮುಂಬರುವ ದಿನಗಳಲ್ಲಿ ಕಾಲೇಜು ಶಿಕ್ಷಣ ಸಂಸ್ಥೆಗಳ ಮಂಜೂರಾತಿಗಾಗಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಗ್ರಾಪಂ ಅಧ್ಯಕ್ಷ ರಾಜೀವ ಪಾಟೀಲ ತಿಳಿಸಿದರು.

ತಾಲೂಕಿನ ಕರಗಾಂವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ವಾರ್ಷಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದರೆ ಅಂತಹ ವಿದ್ಯಾರ್ಥಿಗಳನ್ನು ಮುಂದಿನ ದಿನಗಳಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದರು.

ಬೆಳಕೂಡ ಶಾಲೆಯ ಮುಖ್ಯಶಿಕ್ಷಕಿ ಸುರೇಖಾ ಕುಲಕರ್ಣಿ ಮಾತನಾಡಿ, ಕನ್ನಡ ನೆಲದಲ್ಲಿ ಪ್ರಥಮವಾಗಿ ಕನ್ನಡ ಶಾಲೆಯಲ್ಲಿ ಕಲಿತು ಕನ್ನಡ ಪಾಠ, ಸಂಸ್ಕೃತಿ ಕಲಿಯಬೇಕು ಎಂದರು.

ಗಣ್ಯರು, ಶಿಕ್ಷಣ ಪ್ರೇಮಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡೆಯಲ್ಲಿ, ಕಲಿಕಾ ಮಟ್ಟದಲ್ಲಿ ಉನ್ನತ ಸ್ಥಾನ, ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಾಬುಗೌಡ ಪಾಟೀಲ, ಸತೀಶ ಪರೀಟ, ಲಕ್ಷ್ಮೀ ಕಮತೆ, ಶಿವಾನಂದ ಕಮತೆ, ವಿಜಯ ಸಂಕನ್ನವರ, ಭೀಮಸೈನ ಕಾಂಬಳೆ, ಶಿವಾನಂದ ಕಮತೆ, ಡಿ. ಬಹಾದ್ದೋರಿ, ಆರ್. ಎ.ಕರನಿಂಗ, ರೂಪಾ ಬಬಲಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net