ಕಾಲೇಜಿನಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ವಿಜಯವಾಣಿ - 2025-01-18T184659.596
Published on

ಪಾವಗಡ: ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಈ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಕಾಂ ಓದುತ್ತಿದ್ದ ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

ಎಂದಿನಂತೆ ಇಂದು ಕೂಡ ಕಾಲೇಜಿಗೆ ಹೋಗಿದ್ದ ಮೈಥಿಲಿ, ತರಗತಿ ಮುಗಿಸಿ ಪಟ್ಟಣದ ನಿಲ್ದಾಣಕ್ಕೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಸುಸ್ತಾಗಿ ಕುಸಿದು ಬಿದ್ದಿದ್ದಾಳೆ. ಆಕೆಯನ್ನು ಪಾವಗಡದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆ ವಿದ್ಯಾರ್ಥಿನಿ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಮಗಳ ಅಕಾಲಿಕ ಮರಣಕ್ಕೆ ಪೋಷಕರು ಕಣ್ಣೀರಿಟ್ಟಿದ್ದು, ಆಸ್ಪತ್ರೆಯ ಬಳಿ ವಿದ್ಯಾರ್ಥಿನಿಯ ಸ್ನೇಹಿತರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ಸಿಗಲೆಂದು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರ ವರ್ಗ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ ಬಳಗ ಸಂತಾಪ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net