

ನ್ಯಾಮತಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ, ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮದ ಸತೀಶ್ ಎಂ.ಎಸ್. (24) ಶನಿವಾರ ಮೃತಪಟ್ಟಿದ್ದಾನೆ.
ಹೊನ್ನಾಳಿ ಕಡೆಯಿಂದ ನ್ಯಾಮತಿಗೆ ತೆರಳುತ್ತಿದ್ದ ಖಾಸಗಿ ಬಸ್, ನ್ಯಾಮತಿ ಪಟ್ಟಣದ ಹೊರ ವಲಯದಲ್ಲಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಬೈಕ್ ಸವಾರ ಸತೀಶ್ ತೀವ್ರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾನೆ.
ಈ ಕುರಿತು ಪಾಲಕರು ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.