ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ; ಬೈಕ್ ಸವಾರ ಸಾವು

Mehaboob Karamadi death
Published on

ಹಾನಗಲ್ಲ: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಾನಗಲ್ಲ ತಾಲೂಕಿನ ಗೆಜ್ಜಿಹಳ್ಳಿ ಸಮೀಪ ಸೋಮವಾರ ನಡೆದಿದೆ. ಮೆಹಬೂಬ ಕರಮಡಿ(35) ಮೃತ ಬೈಕ್ ಸವಾರ. ಈತ ತಾಲೂಕಿನ ಹನುಮನಕೊಪ್ಪ ಗ್ರಾಮದವನಾಗಿದ್ದು, ಪಟ್ಟಣದ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ರಾತ್ರಿ ತಾಲೂಕಿನ ಕೂಸನೂರಲ್ಲಿ ಗಲೀಫ್ ಮುಗಿಸಿ ಸೋಮವಾರ ಬೆಳಗ್ಗೆ ಹಾನಗಲ್ಲಿಗೆ ಮರಳುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಹಾನಗಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net