

ಮಂಡ್ಯ: ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಜು.6ರಿಂದ 26ರವರೆಗೆ ಜಿಲ್ಲೆಯಲ್ಲಿ ಉದರ ದರ್ಶಕ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
6ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, 9ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, 10ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, 11ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, 12ರಂದು ಪಾಂಡವಪುರ ಉಪವಿಭಾಗ ಸರ್ಕಾರಿ ಆರೋಗ್ಯ ಕೇಂದ್ರ, 16ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, 18ರಂದು ಚಿನಕುರಳಿ ಸರ್ಕಾರಿ ಆರೋಗ್ಯ ಕೇಂದ್ರ, 19ರಂದು ಬಸರಾಳು ಪ್ರಾಥಮಿಕ ಆರೋಗ್ಯ ಕೇಂದ್ರ, 20ರಂದು ಮಿಮ್ಸ್, 23ರಂದು ಮದ್ದೂರು ತಾಲೂಕು ಆಸ್ಪತ್ರೆ, 24ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, 25ರಂದು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, 26ರಂದು ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.