100, 200, 500 ರೂ. ಮುಖಬೆಲೆಯ ನೋಟನ್ನು ಕಲರ್​ ಪ್ರಿಂಟ್​ ಮಾಡಿ ಚಲಾಯಿಸುತ್ತಿದ್ದ ಗ್ಯಾಂಗ್​ ಸರೆ!

fake note
Published on

ಆನೇಕಲ್​: ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಹೆಡೆಮುರಿ ಕಟ್ಟುವಲ್ಲಿ ಸೂರ್ಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಖತರ್ನಾಕ್ ಅಸಾಮಿಗಳು ಕಲರ್ ಪ್ರಿಂಟಿಂಗ್ ಮಷಿನ್ ಬಳಸಿಕೊಂಡು 100, 200 ಹಾಗೂ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ ಜನಸಂದಣಿಯಿಂದ ಕೂಡಿರುವ ಸಂತೆ, ಅಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಚಲಾವಣೆ ಮಾಡುತ್ತಿದ್ದರು. ಇದನ್ನೂ ಓದಿರಿ ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ನಕಲಿ ನೋಟುಗಳು ಚಲಾವಣೆಯಾಗುತ್ತಿರುವ ಬಗ್ಗೆ ಸೂರ್ಯಸಿಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ವ್ಯಾಪಾರಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯ ಪ್ರವೃತ್ತರಾದ ಪೊಲೀಸರ ಕೈಗೆ, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂ ಎಂಬ ಖತರ್ನಾಕ್​ ಅಸಾಮಿಗಳು ಸಿಕ್ಕಿಬಿದ್ದಿದ್ದಾರೆ. ಇವರನ್ನು ಅಂಗಡಿಯೊಂದರಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿರುವಾಗಲೇ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 100, 200 ಹಾಗೂ 500 ರೂಪಾಯಿ ಮುಖಬೆಲೆಯ ಸುಮಾರು 6,000 ನಕಲಿ ನೋಟುಗಳು ಸೇರಿದಂತೆ ನಕಲಿ ನೋಟು ತಯಾರು ಮಾಡುತ್ತಿದ್ದ ಪ್ರಿಂಟಿಂಗ್ ಮಷಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net