ಸಮಾಜದ ಮುಖ್ಯವಾಹಿನಿಗೆ ಬನ್ನಿ

27 nrp 6
ಎನ್.ಆರ್.ಪುರದ ಕಳ್ಳಿಕೊಪ್ಪದಲ್ಲಿ ರಾಮನಾಥೇಶ್ವರ ಜ್ಞಾನವಿಕಾಸ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಸ್ವ ಸಹಾಯ ಸಂಘದ ಸದಸ್ಯರು ಉದ್ಘಾಟಿಸಿದರು. ನಿರಂಜನ್, ಭಾಗ್ಯಾ ನಂಜುಂಡಸ್ವಾಮಿ, ಅರುಣ್‌ಕುಮಾರ್,ಡಿ.ಆರ್.ಶ್ರೀನಾಥ್ ಇದ್ದರು.
Published on

ಎನ್.ಆರ್.ಪುರ: ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಮಾತೃ ಶ್ರೀ ಹೇಮಾವತಿ ಅಮ್ಮನವರು ಮಹಿಳಾ ಜ್ಞಾನ ವಿಕಾಸ ಕೇಂದ್ರ ಪ್ರಾರಂಭಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ, ಎನ್.ಆರ್.ಪುರ ತಾಲೂಕಿನ ಯೋಜನಾಧಿಕಾರಿ ನಿರಂಜನ್ ತಿಳಿಸಿದರು.
ಬುಧವಾರ ದ್ವಾರಮಕ್ಕಿಯ ಗಣಪತಿ ಪೆಂಡಾಲ್‌ನಲ್ಲಿ ರಾಮನಾಥೇಶ್ವರ ಜ್ಞಾನ ವಿಕಾಸ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಪ್ರತಿ ತಿಂಗಳು ಒಂದೊಂದು ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಜ್ಞಾನ ವಿಕಾಸ ಕೇಂದ್ರದ ಸಭೆಗೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯೆ ಭಾಗ್ಯಾ ನಂಜುಂಡಸ್ವಾಮಿ ಮಾತನಾಡಿ, ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು. ಒಕ್ಕೂಟದ ಅಧ್ಯಕ್ಷ ಅರುಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯರಿಗೆ ವಿವಿಧ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮೆಣಸೂರು ಗ್ರಾಪಂ ಸದಸ್ಯ ಶ್ರೀನಾಥ್,ದ್ವಾರಮಕ್ಕಿಯ ಪ್ರಗತಿ ಪರ ಕೃಷಿಕ ದಿವಾಕರ್, ಒಕ್ಕೂಟದ ಉಪಾಧ್ಯಕ್ಷ ಎಲ್ದೋ, ಪದಾಧಿಕಾರಿ ಉದಯಕುಮಾರ್, ವಲಯ ಮೇಲ್ವೀಚಾರಕ ಸತೀಶ್, ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ರಂಜಿತಾ, ಸೇವಾ ಪ್ರತಿನಿಧಿ ರಮಾ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಸೀತಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net