ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ

RemasterDirector_22abe5b5f
ಪಿರಿಯಾಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್ ಶೋನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ವೈ.ವಿಜಯೇಂದ್ರ, ಜಿ.ಡಿ.ಹರೀಶ್, ಕೆ.ಮಹದೇವ್, ಪಿ.ಎಂ.ಪ್ರಸನ್ನ, ಎಚ್.ಸಿ.ಬಸವರಾಜು ಮತ್ತಿತರರು ಇದ್ದರು.
Published on

ಪಿರಿಯಾಪಟ್ಟಣ: ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರ ಬರುತ್ತಿದೆ. ಕಳೆದ ಏಳು ತಿಂಗಳಿಂದ ವಿವಿಧ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕದೆ ಇರುವ ಕಾಂಗ್ರೆಸ್ ಪಿಕ್‌ಪಾಕೆಟ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.


ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಪಟ್ಟಣದ ಬಿ.ಎಂ.ರಸ್ತೆಯಲ್ಲಿ ಮಂಗಳವಾರ ರೋಡ್ ಶೋ ನಡೆಸಿದರು.


ಮಹಿಳೆಯರಿಗೆ 2,000 ಹಣ ನೀಡುವ ನೆಪದಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಕಾಂಗ್ರೆಸ್‌ನವರು ಪಿಕ್‌ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಜನವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಯದುವೀರ್ ಅತ್ಯಂತ ಸಂಭಾವಿತ ವ್ಯಕ್ತಿಯಾಗಿದ್ದು, ಮಾದರಿ ಸಂಸದರಾಗಿ ಕೆಲಸ ಮಾಡುವ ಎಲ್ಲಾ ಅರ್ಹತೆ ಹೊಂದಿದ್ದಾರೆ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಬೇಕು. ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.


ಹುಣಸೂರು ಶಾಸಕ ಜಿ.ಡಿ.ಹರೀಶ್, ಮಾಜಿ ಶಾಸಕ ಕೆ.ಮಹದೇವ್, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಮಾತನಾಡಿದರು.
ಸಂಚಾರ ವ್ಯವಸ್ಥೆ ಅಸ್ತವ್ಯಸ್ತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧಗಂಟೆಗೆ ಹೆಚ್ಚು ಕಾಲ ಮುಖಂಡರುಗಳು ಭಾಷಣ ಮಾಡುತ್ತಿದ್ದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ನೂರಾರು ವಾಹನಗಳು ಕಾದು ನಿಲ್ಲುವಂತಾಗಿತು. ರೋಡ್ ಶೋ ಮುಗಿದ ನಂತರ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಪೊಲೀಸರು ಹರಸಾಹಸಪಟ್ಟರು.

ಮಾಜಿ ಸಚಿವ ಎ.ಎಸ್.ರಾಮದಾಸ್, ಮಾಜಿ ಶಾಸಕ ಎಚ್.ಸಿ.ಬಸವರಾಜು, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಕೆ.ಎನ್.ಸೋಮಶೇಖರ್, ಆರ್.ಟಿ.ಸತೀಶ್, ದೇವರಾಜ್ ಒಡೆಯರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net