ವೀರ ಯೋಧ ಸಾಗರ್ ಪುಣ್ಯಸ್ಮರಣೆ

30 skp 1--
ವೀರಯೋದ ಸಾಗರ್ ಅವರ 23ನೇ ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಸಾಗರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಕಡಗರವಳ್ಳಿ ಅಶೋಕ, ಲೋಹಿತ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೇಶವಮೂರ್ತಿ ಉಪಸ್ಥಿತರಿದ್ದರು.
Published on

ಸಕಲೇಶಪುರ: ಕಾಶ್ಮೀರದ ಪೂಂಚ್ ಜಿಲ್ಲೆಯ ಬಟ್ಟೆಕುಮಾರಿ ಎಂಬಲ್ಲಿ ಭಯೋತ್ಪಾಧಕರೊಂದಿಗಿನ ಹೋರಾಟದಲ್ಲಿ ವೀರ ಮರಣವನ್ನಪ್ಪಿದ ತಾಲೂಕಿನ ವೀರಯೋಧ ಸಾಗರ್ ಅವರ 23ನೇ ಪುಣ್ಯಸ್ಮರಣೆ ಅಂಗವಾಗಿ ಸಕಲೇಶಪುರ ತಾಲೂಕು ಒಕ್ಕಲಿಗರ ಸಂಘ ಹಾಗೂ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹೊಸ ಬಸ್ ನಿಲ್ದಾಣದ ಎದುರಿನ ಸಾಗರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಈ ವೇಳೆ ಒಕ್ಕಲಿಗರ ಪದಾಧಿಕಾರಿಗಳಾದ ಕಡಗರವಳ್ಳಿ ಅಶೋಕ, ಲೋಹಿತ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೇಶವಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net