ಸಾಲೂರು ಹಿರಿಯ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆ

30 HANUR 4
ಸಾಲೂರು ಬೃಹನ್ಮಠದ ಪಟ್ಟದ ಹಿರಿಯ ಶ್ರೀ ಲಿಂಗೈಕ್ಯ ಗುರುಸ್ವಾಮೀಜಿ ಅವರ ಗದ್ದುಗೆಗೆ 11ನೇ ದಿನದ ಪುಣ್ಯ ಸ್ಮರಣೆ ಹಿನ್ನೆಲೆ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಪೂಜಾ ಕಾರ್ಯವನ್ನು ನೆರವೇರಿಸಿದರು.
Published on

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠ ಸಮೀಪದ ತೋಟದಲ್ಲಿ ಲಿಂಗೈಕ್ಯ ಶ್ರೀ ಪಟ್ಟದ ಗುರುಸ್ವಾಮೀಜಿ ಅವರ ಗದ್ದುಗೆಗೆ ಶುಕ್ರವಾರ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಪೀಠಾಧಿಪತಿ ಡಾ.ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಪೂಜಾ ಕಾರ್ಯವನ್ನು ನೆರವೇರಿಸಿದರು.

ಶ್ರೀಗಳ ಗದ್ದುಗೆಯನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಕನಕಪುರ ದೇಗುಲ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರಿಗೆ ಪಾದಪೂಜೆ ನೆರವೇರಿಸಿದರು. ಬಳಿಕ ಗದ್ದುಗೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಧೂಪ ದೀಪದ ಆರತಿ ಸೇವೆ ಹಾಗೂ ನೈವೇದ್ಯದೊಂದಿಗೆ ಪೂಜಾ ಕಾರ್ಯವನ್ನು ನೆರವೇರಿಸಿದರು.

ಗುಂಡೇಗಾಲ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಠದ ಭಕ್ತರು, ಬೇಡಗಂಪಣ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net