

ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದ ಶ್ರೀ ರಾಮಯೋಗೀಶ್ವರ ಮಠದ ಲಿಂಗೈಕ್ಯ ಶತಾಯುಷಿ ಶ್ರೀಮರಿದೇವರು ಸ್ವಾಮೀಜಿ ಅವರ 17ನೇ ವರ್ಷದ ಹಾಗೂ ಲಿಂಗೈಕ್ಯ ಸದಾಶಿವ ಸ್ವಾಮೀಜಿ ಅವರ 7ನೇ ವರ್ಷದ ಪುಣ್ಯಸ್ಮರಣೆ ಮತ್ತು ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮವನ್ನು ಸೆ.11ರಂದು ಬೆಳಗ್ಗೆ 10 ಗಂಟೆಗೆ ಮಠದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪೀಠಾಧ್ಯಕ್ಷ ಶ್ರೀಶಿವಬಸವ ಸ್ವಾಮೀಜಿ ತಿಳಿಸಿದರು.
ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಎಂ.ಬಿ.ಪಾಟೀಲ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಚಿವ ಚಲುವರಾಯಸ್ವಾಮಿ ಮತ್ತು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಲಿಂಗೈಕ್ಯ ಸ್ವಾಮೀಜಿಗಳ ಭವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನುಡಿನಮನ ಸಲ್ಲಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಎಚ್.ಟಿ.ಮಂಜು, ಭಾರತೀಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎಂ.ಜಿ.ಸುದೀಪ್, ಡಾ.ಮಹಾಂತೇಶ ಬಿರಾದಾರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಇಂಡುವಾಳು ಸಚ್ಚಿತಾನಂದ, ಮನ್‌ಮುಲ್ ನಿರ್ದೇಶಕ ಶಿವಕುಮಾರ್, ಆರ್‌ಟಿಒ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಅಪಾರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಶ್ರೀನಿವಾಸ್, ಗ್ರೇಡ್-2 ತಹಸೀಲ್ದಾರ್ ಎಸ್.ಸಂತೋಷ್, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಶಿವಕುಮಾರ್ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಂಕರನಂಜಪ್ಪ, ತಮ್ಮಯ್ಯ, ಬಿ.ಇ.ಹರೀಶ್, ಬಿ.ಕೆ.ರವೀಂದ್ರ ಮಾದಪ್ಪ ಇತರರು ಇದ್ದರು.