‘ಬೆಲ್ಲದಾರತಿ’ ಸಂಚಿಕೆ ಬಿಡುಗಡೆ ಶೀಘ್ರ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Commemorative Issue Subcommittee Meeting Mandya
Published on

ಮಂಡ್ಯ: ನಗರದಲ್ಲಿ ನಡೆದಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿಜಿಟಲ್ ರೂಪದಲ್ಲಿ ಸಿದ್ಧಪಡಿಸಲಾಗಿರುವ ‘ಬೆಲ್ಲದ ಆರತಿ ಸ್ಮರಣ ಸಂಚಿಕೆ’ಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಮರಣ ಸಂಚಿಕೆ ಉಪಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಡು ಪ್ರತಿಯನ್ನು ಪರಿಶೀಲಿಸಿ ಸ್ವಾಗತ ಸಮಿತಿ ಸದಸ್ಯರ ಭಾವಚಿತ್ರ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ ಎಂದರು.

ಈಗಾಗಲೇ ಸ್ಮರಣ ಸಂಚಿಕೆ ವಿನ್ಯಾಸವು ಆಕರ್ಷಕವಾಗಿ ಮೂಡಿಬಂದಿದೆ. 2000 ಸ್ಮರಣ ಸಂಚಿಕೆ ಪ್ರತಿ ಮುದ್ರಣ ಗೊಳಿಸಲು ತೀರ್ಮಾನಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವುದರೊಂದಿಗೆ ಗಣ್ಯರನ್ನು ಆಹ್ವಾನಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸಂಚಿಕೆ ಬಿಡುಗಡೆಗೆ ದಿನಾಂಕ ನಿಗದಿಪಡಿಸಲಾಗುವುದು. ಸಮಿತಿಯ ಸದಸ್ಯರು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೋಮಲ್ಕುಮಾರ್, ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net