ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಎಂಬಿಎ ಮತ್ತು ಎಂಸಿಎ ಕೋರ್ಸ್‌ ಆರಂಭ

Published on

ಮೈಸೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಆರಂಭಿಸಲಾಗುತ್ತಿರುವ ಎಂಬಿಎ ಮತ್ತು ಎಂಸಿಎ ಕೋರ್ಸ್‌ಗೆ ಡಿ.20ರಂದು ಚಾಲನೆ ನೀಡಲಾಗುವುದು.
ಕಾಲೇಜಿನ ಒಳ ಕ್ರೀಡಾಂಗಣದಲ್ಲಿ ಸಂಜೆ 4ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ ಡಾ.ಬರ್ನಾರ್ಡ್ ಮೊರಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಎಕ್ಸ್‌ಐಎಂಇ ಅಧ್ಯಕ್ಷ ಜೆ.ಪಿಲಿಫ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ನವದೆಹಲಿಯ ಯುಜಿಸಿ ಶೈಕ್ಷಣಿಕ ಅಧಿಕಾರಿ ಡಾ.ಕೆ.ಸಿ.ಲತಾ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳ ಡೈರೆಕ್ಟರ್ ರೆವರೆಂಡ್ ಡಾ.ಬರ್ನಾಡ್ ಪ್ರಕಾಶ್ ಬಾರ್ನಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net