

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಆ. 9ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸಲಿದ್ದಾರೆ. ಸಭೆಗೆ ಇಲಾಖೆಗೆ ಸಂಬಂಧಿಸಿದ ಯಾವುದಾದರೂ ಮಾನವ ಹಕ್ಕುಗಳ ಪ್ರಕರಣಗಳಿದ್ದಲ್ಲಿ, ಅವುಗಳ ವಿವರ ಮಾಹಿತಿಯೊಂದಿಗೆ ಎಲ್ಲ ಇಲಾಖೆ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.