ಕಮಿಷನರ್ ಅಮಾನತು ಆದೇಶ ಹಿಂಪಡೆಯಿರಿ

ಮಾನ್ವಿಯಲ್ಲಿ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹೀದ್‌ಗೆ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕ ಮನವಿ ಸಲ್ಲಿಸಿತು. ಜಿಲ್ಲಾ ಅಧ್ಯಕ್ಷ ಶರಣಬಸವ ನಾಯಕ ಜಾನೇಕಲ್, ಪ್ರಮುಖರಾದ ಬುದ್ದಪ್ಪ ನಾಯಕ, ಜಲ್ಲಿ ಆಂಜನೇಯ ನಾಯಕ ನೀರಮಾನ್ವಿ ಇತರರಿದ್ದರು.
ಮಾನ್ವಿಯಲ್ಲಿ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹೀದ್‌ಗೆ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕ ಮನವಿ ಸಲ್ಲಿಸಿತು. ಜಿಲ್ಲಾ ಅಧ್ಯಕ್ಷ ಶರಣಬಸವ ನಾಯಕ ಜಾನೇಕಲ್, ಪ್ರಮುಖರಾದ ಬುದ್ದಪ್ಪ ನಾಯಕ, ಜಲ್ಲಿ ಆಂಜನೇಯ ನಾಯಕ ನೀರಮಾನ್ವಿ ಇತರರಿದ್ದರು.
Published on

ಮಾನ್ವಿ: ಆರ್‌ಸಿಬಿ ತಂಡದ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತು ಮಾಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಆರ್‌ಸಿಬಿ ತಂಡದ ಮುಖ್ಯಸ್ಥ ಹಾಗೂ ಪದಾಧಿಕಾರಿಗಳು ಸಂಭ್ರಮಾಚರಣೆಗೆ ಅನುಮತಿ ಕೋರಿದಾಗ ಪೊಲೀಸ್ ಆಯುಕ್ತರು ನಿರಾಕರಿಸಿದ್ದಾರೆ. ಆದರೆ, ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟ ಪ್ರಕರಣಕ್ಕೆ ಪೊಲೀಸ್ ಆಯುಕ್ತ ಬಿ.ದಯಾನಂದ ಅವರನ್ನು ಸರ್ಕಾರ ಅಮಾನತು ಮಾಡಿರುವುದು ಸರಿಯಲ್ಲ. ದಕ್ಷ ಅಧಿಕಾರಿ ಬಿ.ದಯಾನಂದ ಬೆಂಗಳೂರು ನಗರ ಆಯುಕ್ತರಾಗಿ ಎರಡು ವರ್ಷದ ಅವಧಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂಥ ಅಧಿಕಾರಿಯನ್ನು ರಾಜಕಾರಣಿಗಳು ತಪ್ಪು ಮುಚ್ಚಿಕೊಳ್ಳಲು ಅಧಿಕಾರಿಗಳಿಗೆ ಶಿಕ್ಷೆ ನೀಡುವುದು ಸಲ್ಲದು. ಆದ್ದರಿಂದ ಸರ್ಕಾರ ಅಮಾನತು ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹೀದ್‌ಗೆ ಮನವಿ ಸಲ್ಲಿಸಿದರು.

ಮಹಾಸಭಾ ಜಿಲ್ಲಾ ಅಧ್ಯಕ್ಷ ಶರಣಬಸವ ನಾಯಕ ಜಾನೇಕಲ್, ಪ್ರಮುಖರಾದ ಬುದ್ದಪ್ಪ ನಾಯಕ, ಬಸವರಾಜ ನಾಯಕ, ವೀರೇಶ ನಾಯಕ, ಪ್ರಕಾಶ ನಾಯಕ, ಶ್ರೀರಾಮ ನಾಯಕ, ಹನುಮೇಶ ನಾಯಕ, ಗೋವಿಂದ ನಾಯಕ, ಅಂಬಣ್ಣ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net