ಭ್ರಷ್ಟಾಚಾರ ಕಡಿವಾಣಕ್ಕೆ ಆಯುಕ್ತರು ಮುಂದಾಗಲಿ

raichur
raichur
Published on

ರಾಯಚೂರು ರಾಯಚೂರು ನಗರವು ನಗರಸಭೆಯಿಂದ ಮಹಾನಗರದ ಪಾಲಿಕೆಯಾದರು ಭ್ರಷ್ಟಾಚಾರ ನಿಲ್ಲುತ್ತಿಲ್ಲ, ಪಾಲಿಕೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ ಅವ್ಯವಹಾರ ನಡೆಸುತ್ತಿದ್ದರೂ, ಆಯಕ್ತರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ನಗರ ಉಸ್ಮಾನಿಯ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್. ಮಹಾವೀರ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಸಮಯದ ಫಲಕವನ್ನು ಅಳವಡಿಸಲಾಗಿಲ್ಲ. ಇದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಆಯುಕ್ತರ ಬಳಿ ಹೇಳಿಕೊಳ್ಳಲು ತೊಂದರೆ ಉಂಟಾಗುತ್ತಿದೆ. ಅಲ್ಲದೇ ಯಾವಾಗ ನೋಡಿದರೂ ಆಯುಕ್ತರು ಸಭೆ, ಮತ್ತು ಸ್ಥಳ ಪರಿಶೀಲನೆಗೆ ತೆರಳಿದ್ದಾರೆಂದು ಹೇಳಲಾಗುತ್ತಿದ್ದು, ಸರಿಯಾದುದ್ದಲ್ಲ ಎಂದರು.

ವಾರ್ಡ್ ನಂ.13ರ ಪಾಲಿಕೆ ಸದಸ್ಯೆಯ ಪತಿ ಅನಧೀಕೃತ ತರಕಾರಿ ಮಾರುಕಟ್ಟೆಯನ್ನು ನಿರ್ಮಿಸಿದ್ದು, ಈ ಬಗ್ಗೆ ಗಮನಕ್ಕಿದ್ದರೂ, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಆಯುಕ್ತರು ವಿಫಲರಾಗಿದ್ದಾರೆ ಎಂದರು.

ಅನಧೀಕೃತ ತರಕಾರಿ ಮಾರುಕಟ್ಟೆಯಿಂದ ಸರ್ಕಾರಕ್ಕೆ ಕೋಟಿ ಕೋಟಿ ರೂ,ಗಳ ನಷ್ಟ ಉಂಟಾಗುತ್ತಿದೆ. ಹತ್ತು ದಿನದೊಳಗೆ ಅನಧೀಕೃತ ತರಕಾರಿ ಮಾರುಕಟ್ಟೆಯನ್ನು ತೆರವುಗೊಳಿಸದೇ ಇದ್ದಲ್ಲಿ ಆಡಳಿತ ಮಂಡಳಿ ಹಾಗೂ ಆಯುಕ್ತರ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು. ಜತೆಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಕಲಿಸಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಭು ನಾಯಕ, ಖಾಜಪ್ಪ, ಉದಯಕುಮಾರ, ಬಸವರಾಜ, ರಿಜ್ವಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net