ಸಂಶೋಧನೆಗೆ ಬದ್ಧತೆ, ಛಲ ಮುಖ್ಯ

10 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಂಶೋಧಕ ವಿದ್ಯಾರ್ಥಿಗಳಿಗೆ ದೂರದೃಷ್ಟಿ ಮುಖ್ಯ. ಸಂಶೋಧನೆಯಲ್ಲಿ ನಿರತರಾದಾಗ ತಮ್ಮ ಗಮನವನ್ನು ಕೇಂದ್ರೀಕರಿಸಿ ಸಂಶೋಧನೆ ಮಾಡಬೇಕು ಎಂದು ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಹೇಳಿದರು.

ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ. ಎಸ್​.ಪಿ. ಹಿರೇಮಠ ಸ್ಮರಣೆ ದತ್ತಿ ನಿಮಿತ್ತ ಸೋಮವಾರ ಆಯೋಜಿಸಿದ್ದ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಧನೆಯ ಛಲದೊಂದಿಗೆ ಸಂಶೋಧನೆಯಲ್ಲಿ ತೊಡಗಬೇಕು. ನಿರಂತರ ಪ್ರಯತ್ನದಿಂದ ಎಂತಹ ಸಾಧನೆಯನ್ನೂ ಮಾಡಬಹುದು. ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ನಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೊ. ಮಾಲತಿ ಪಟ್ಟಣಶೆಟ್ಟಿ ಮಾತನಾಡಿದರು. ಕರ್ನಾಟಕ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ರಸಾಯನ ಶಾಸ್ತ್ರದ ನಮ್ರತಾ ಸಿನ್ನೂರ ಯುವ ವಿಜ್ಞಾನಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಬಸವಪ್ರಭು ಹೊಸಕೇರಿ, ಕೆ.ಎಂ. ಅಂಗಡಿ, ಮಹಾಂತೇಶ ನರೇಗಲ್​, ಇತರರು ಇದ್ದರು.

ಶಿವಾನಂದ ಭಾವಿಕಟ್ಟಿ ಸ್ವಾಗತಿಸಿದರು. ಡಾ. ಶೆಲಜಾ ಅಮರಶೆಟ್ಟಿ ನಿರೂಪಿಸಿದರು. ಶಂಕರ ಕುಂಬಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net