

ಕುಂದಾಪುರ: ಕೆಲಸವಿಲ್ಲದೆ ಮಾನಸಿಕವಾಗಿ ನೊಂದು ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಕೃಷ್ಣರಾಜ (31) ಎಂಬುವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣರಾಜ ಬಿ.ಕಾಂ ವ್ಯಾಸಂಗ ಮುಗಿಸಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದು, 6 ತಿಂಗಳಿಂದ ಕೆಲಸವಿಲ್ಲದೇ ಊರಿಗೆ ಬಂದಿದ್ದರು. ಇದೇ ವಿಚಾರದಲ್ಲಿ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.