

ಕನಕಪುರ: ಮೈಕ್ರೋಫೈನಾನ್ಸ್ ಕಿರುಕುಳದಿಂದ ತಾಲೂಕಿನ ಗೌಡಹಳ್ಳಿಯಲ್ಲಿ ಕೂಲಿ ಕಾರ್ಮಿಕನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೌಡಹಳ್ಳಿ ಅರುಣ್(28) ಮೃತ. ಕನಕಪುರ ನಗರದ ಹಲಸಿನಮರದೊಡ್ಡಿಯ ಖಾಸಗಿ ಫೈನಾನ್ಸ್‌ನಲ್ಲಿ 4 ಲಕ್ಷ ರೂ ಸಾಲ ಪಡೆದಿದ್ದು, 6-7 ಕಂತು ಮರುಪಾವತಿಸಿದ್ದಾರೆ. ನಂತರ ಚಂದಾ ಪಾವತಿಸಲು ವಿಳಂಬ ಮಾಡಿದ್ದರು, ಇದೇ ಕಾರಣಕ್ಕೆ ೈನಾನ್ಸ್ ಸಿಬ್ಬಂದಿ ಸಾಲ ವಸೂಲಿ ನೆಪದಲ್ಲಿ ಕಿರುಕುಳ ನೀಡುತ್ತಿದ್ದರು. ಶನಿವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮನೆಯ ಮುಂದೆಯೇ ಕುಳಿತಿದ್ದ ಸಿಬ್ಬಂದಿ ಸಾಲ ಮರುಪಾವತಿಗೆ ಅರುಣ್ ಅವರನ್ನು ಪೀಡಿಸಿದ್ದಾರೆ.
ಬಳಿಕ ಬೇರೆಡೆ ಹೋಗಿ ಸಂಜೆ ಮತ್ತೆ ಮನೆಯ ಮುಂದೆ ಬಂದು, ಅವಾಚ್ಯ ಪದಗಳಿಂದ ನಿಂದಿಸಿ ಜಗಳ ಮಾಡಿದ್ದಾರೆ
ಎನ್ನಲಾಗಿದ್ದು, ಇದರಿಂದ ಮನನೊಂದ ಅರುಣ್, ಫೈನಾನ್ಸ್ ಸಿಬ್ಬಂದಿ ಮುಂದೆಯೇ ವಿಷ ಸೇವಿಸಿದ್ದಾರೆ. ತಕ್ಷಣ ಅರುಣ್‌ರನ್ನು ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಮೃತನ ತಂದೆ ಜಯಣ್ಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗನ ಸಾವಿಗೆ ಕಾರಣರಾದ ಫೈನಾನ್ಸ್ ಸಂಸ್ಥೆ, ಸಂಸ್ಥೆಯ ಸಿಬ್ಬಂದಿ ಗಂಗಾಧರ್ ಮತ್ತು ಮನು ವಿರುದ್ಧ ಕಾನೂನು ಕ್ರಮ ಜರುಗಿಸಬೇಕು
ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಗ್ರಾಮಾಂತರ ಠಾಣೆ ಸಬ್‌ಇನ್‌ಸ್ಪೆಕ್ಟರ್ ಮನೋಹರ್ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪೊಲೀಸ್, ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ ಕನಕಪುರ: ತಾಲೂಕಿನ ಹಲಸಿನಮರದೊಡ್ಡಿ-ಕುರುಬಳ್ಳಿ ಸಮೀಪದ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿದ್ದು, ಪ್ರಕರಣ ಸಂಬಂಧ ಮೂವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.
ಹಲಸಿನಂಬರದೊಡ್ಡಿ-ಕುರುಬಳ್ಳಿದೊಡ್ಡಿ ಗ್ರಾಮದ ಕಿರಣ್, ಪ್ರತಾಪ್, ಸುಂದರ್ ಬಂಧಿತರು. ಇನ್ನು ತಲೆಮರೆಸಿಕೊಂಡಿರುವ ಗುರು, ತಿಮ್ಮೇಶ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಶುಕ್ರವಾರ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಆರೋಪಿಗಳು ಅಧಿಕಾರಿ ಮತ್ತು ಸಿಬ್ಬಂದಿಯ ಜೀಪನ್ನು ಅಡ್ಡಗಟ್ಟಿ, ಹಲ್ಲೆಗೆ ಯತ್ನಿಸಿದರು ಎನ್ನಲಾಗಿದೆ. ಈ ವೇಳೆ ಅರಣ್ಯ ಸಿಬ್ಬಂದಿ ಸಾತನೂರು ಅರಣ್ಯ ಉಪವಲಯ ಅರಣ್ಯಾಧಿಕಾರಿ ಮುತ್ತುನಾಯಕ್ ಹಾಗೂ ಸಾತನೂರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಮೇಲೂ ಪುಂಡರು ಹಲ್ಲೆಗೆ ಮುಂದಾಗಿದ್ದಾರೆ. ಬಳಿಕ ಮೂವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.ಸಾತನೂರು ಉಪವಲಯ ಅರಣ್ಯಾಧಿಕಾರಿ ಮುತ್ತುನಾಯಕ್ ನೀಡಿದ ದೂರಿನ ಮೇರೆಗೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆಮರೆಸಿಕೊಂಡಿದ್ದ ಆರೋಪಿ ಬಂಧನಬಿಡದಿ: ನ್ಯಾಯಾಲಯಕ್ಕೆ ಹಾಜರಾಗದೇ ಬರೋಬ್ಬರಿ 15 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಿಡದಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ 171/2004 ಕಲಂ 323, 324, 326, 504, 114, 34 ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧಿಸಿದಂತೆ ಜೆಎಂಎ್ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದು, 2010ರ ನ.30ರಿಂದಲೂ ಆರೋಪಿಯು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಬಿಡದಿ ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಆನೆ ದಾಳಿಗೆ ಮಾವು, ತೆಂಗು, ಸೀಮೆ ಹುಲ್ಲು ಹಾನಿಕೈಲಾಂಚ: ಹೋಬಳಿಯ ಹುಣಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮನಾಯಕನಹಳ್ಳಿಯಲ್ಲಿ ಶನಿವಾರ ರಾತ್ರಿ ಮೂರು ಆನೆಗಳು ದಾಳಿ ನಡೆಸಿದ್ದು, ರೈತ ರಾಮಯ್ಯ ಅವರ ಹಲಸು, ಮಾವು, ತೆಂಗು, ಸೀಮೆಹುಲ್ಲು ಹಾಗೂ ನೀರಾವರಿ ಪರಿಕರ ನಾಶ ಪಡಿಸಿವೆ.