ಜಿಗುಪ್ಸೆಯಿಂದ ಕೆರೆಗೆ ಹಾರಿ ಆತ್ಮಹತ್ಯೆ

devappa
ದೇವಪ್ಪ ನಾಯ್ಕ
Published on

ಪುತ್ತೂರು ಗ್ರಾಮಾಂತರ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನಡೆದಿದೆ. ಮುಂಡ್ಯ ನಿವಾಸಿ ದೇವಪ್ಪ ನಾಯ್ಕ (55) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬುಧವಾರ ರಾತ್ರಿ ಊಟ ಮಾಡಿ ಮಲಗಿದ್ದ ದೇವಪ್ಪ ನಾಯ್ಕ ಗುರುವಾರ ಬೆಳಗ್ಗೆಯಿಂದಲೇ ಕಾಣೆಯಾಗಿದ್ದರು. ಮನೆಯವರು ಎಷ್ಟೇ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಶುಕ್ರವಾರ ಅವರ ಮೃತದೇಹ ಪಟ್ರೋಡಿ ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ದೇವಪ್ಪ ನಾಯ್ಕ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ನೀಡಲಾಗಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net