ಜನ್ಮದಿನದಂದೇ ಯುವಕ ಆತ್ಮಹತ್ಯೆ

suicide
Published on

ಕಾರ್ಕಳ: ಸಾಣೂರಿನಲ್ಲಿ ಶನಿವಾರ ತನ್ನ ಜನ್ಮದಿನದಂದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಣೂರಿನ ಕಡಬಬೆಟ್ಟು ನಿವಾಸಿ ಸುಮನ್ ಶೆಟ್ಟಿ (22) ಆತ್ಮಹತ್ಯೆಗೆ ಶರಣಾದ ಯುವಕ. ಬೆಳಗ್ಗೆ ಸಾಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಸುಮನ್ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಈ ವೇಳೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕಡಬಬೆಟ್ಟು ಜನನಿಬೀಡ ಪ್ರದೇಶದಲ್ಲಿರುವ ಬಾವಿಗೆ ಸುಮನ್ ಹಾರಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ಶರೀರವನ್ನು ಮೇಲಕ್ಕೆತ್ತಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net