ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪಣ

ಮುನಿರಾಬಾದ್ ಸಮೀಪದ ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಜಯಶ್ರೀ ಉದ್ಘಾಟಿಸಿದರು. ಪ್ರಾಚಾರ್ಯ ಡಾ.ಟಿ.ಎಚ್.ಬಸವರಾಜ, ಐಕ್ಯೂಎಸಿ ಸಂಚಾಲಕ ಡಾ.ನಿಂಗಪ್ಪ ಕಂಬಳಿ ಇತರರಿದ್ದರು.

Published on

ಮುನಿರಾಬಾದ್: ಇತ್ತೀಚೆಗೆ ಸಮಾಜದಲ್ಲಿ ಮಾದಕ ದ್ರವ್ಯ ವ್ಯಸನಿಗಳು ಹೆಚ್ಚುತ್ತಿದ್ದು, ಎಲ್ಲರೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪಣತೊಡಬೇಕು ಎಂದು ಕೊಪ್ಪಳ ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಜಯಶ್ರೀ ಹೇಳಿದರು.

ಸಮೀಪದ ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಪುನರ್ವಸತಿ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಚಾರ್ಯ ಡಾ.ಟಿ.ಎಚ್.ಬಸವರಾಜ ಮಾತನಾಡಿ, ಇಂಥ ಜಾಗೃತಿ ಕಾರ್ಯಕ್ರಮಗಳಿಂದ ಸದೃಢ ಸಮಾಜ ನಿರ್ಮಿಸುವುದು ಕಾಲೇಜಿನ ಮುಖ್ಯ ಉದ್ದೇಶ ಎಂದರು.

ಐಕ್ಯೂಎಸಿ ಸಂಚಾಲಕ ಡಾ.ನಿಂಗಪ್ಪ ಕಂಬಳಿ ಮಾತನಾಡಿ, ಯುವಕರು ದುಶ್ಚಟಕ್ಕೆ ಬಲಿಯಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಬೆಳೆದು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ತಿಳಿಸಿದರು. ನಂತರ ಮದ್ಯಮುಕ್ತ ಸಂಕಲ್ಪಕ್ಕಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎರ‌್ರಿಸ್ವಾಮಿ, ಇತಿಹಾಸ ವಿಭಾಗದ ಮುಖ್ಯಸ್ಥೆ ಕವಿತಾ, ಗ್ರಾಪಂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರೇಣುಕಾ ಚಿಕೆನಕೊಪ್ಪ, ಭರಮಪ್ಪ ಇಂದರಗಿ, ನಿಂಗಪ್ಪ ಬೇವಿನಹಳ್ಳಿ, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net