ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಬದ್ಧ: ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ

28 RPT 2
ರಿಪ್ಪನ್‌ಪೇಟೆಯಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟç ಕ್ಷನ್ ವಕರ‍್ಸ್ ಸೆಂಟ್ರಲ್ ಯೂನಿಯನ್ ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಗೋಪಾಲಕೃಷ್ಣ ಬೇಳೂರು, ಧನಲಕ್ಷಿ÷್ಮÃ, ಉಬೇದುಲ್ಲಾ ಷರೀಫ್, ಜಯಮ್ಮ, ಸುಽÃಂದ್ರ, ಸುಬ್ರಮಣಿ ಇತರರಿದ್ದರು.
Published on

ರಿಪ್ಪನ್‌ಪೇಟೆ: ತಮ್ಮ ಜೀವನೋಪಾಯಕ್ಕಾಗಿ ಹಗಲಿರುಳು ಶ್ರಮಿಸುವ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಸದಾ ಬದ್ಧನಾಗಿರುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಜಿಎಸ್‌ಬಿ ಕಲ್ಯಾಣ ಮಂದಿರದಲ್ಲಿ ಸೋಮವಾರ ಕರ್ನಾಟಕ ಸ್ಟೇಟ್ ಕನ್‌ಸ್ಟçಕ್ಷನ್ ವಕರ‍್ಸ್ ಸೆಂಟ್ರಲ್ ಯೂನಿಯನ್ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು, ಗ್ರಾಮಾಂತರ ವಿಭಾಗದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಕಾರ್ಮಿಕ ಸಂಘಟನೆಗಳು ಬಲಿಷ್ಠವಾಗಿವೆ. ಆದರೆ ನಮ್ಮ ಜಿಲ್ಲೆಗಳಲ್ಲಿ ಮಾತ್ರ ಇನ್ನೂ ಗಟ್ಟಿಯಾಗಿಲ್ಲ. ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಬಹುದು. ಪಕ್ಷ, ಸರ್ಕಾರಗಳು ಯಾವುದೇ ಇರಲಿ, ಕೀಳರಿಮೆ ಬಿಟ್ಟು ನಿಮ್ಮ ಪಾಲಿನ ಸವಲತ್ತನ್ನು ಪಡೆದುಕೊಳ್ಳಿ. ಕಾರ್ಮಿಕರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಬಹಳ ಶ್ರಮಪಟ್ಟು ದುಡಿಯುವ ನೀವು ಮಕ್ಕಳ ವಿದ್ಯಾಭ್ಯಾಸವನ್ನು ಕಡೆಗಣಿಸಬೇಡಿ. ನಿಮ್ಮ ಬೆವರಿನ ಹನಿ ನಿಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಲಿ ಎಂದರು.
ಈ ಹಿಂದೆ ಶಾಸಕನಾಗಿದ್ದಾಗ ಅಡಕೆ ಕೊಯ್ಲು ಮಾಡುವ ಕಾರ್ಮಿಕರಿಗೆ ಯಾವುದೇ ಜೀವನ ಭದ್ರತೆ ಇರಲಿಲ್ಲ. ಆ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ಅಡಕೆ ಮರದಿಂದ ಬಿದ್ದು ಮೃತಪಟ್ಟಿದ್ದರು. 160 ಜನ ಕೊನೆಗಾರರಿಗೆ ನನ್ನ ಸ್ವಂತ ಹಣದಿಂದ ವಿಮೆ ಮಾಡಿಸಿ ಜೀವನಕ್ಕೆ ಆಸರೆಯಾಗುವ ಪ್ರಯತ್ನ ಮಾಡಿದ್ದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬಡಕುಟುಂಬದವರ ತೊಂದರೆ ನಿವಾರಣೆಗಾಗಿ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಕಟ್ಟಡ ಕಾರ್ಮಿಕರ ಕಷ್ಟ ಸುಖಗಳಿಗೆ ಗಟ್ಟಿ ಧ್ವನಿಯಾಗಿದ್ದು ಸರ್ಕಾರದಿಂದ ಆಗಬೇಕಾದ ಕೆಲಸ ಕಾರ್ಯಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಹಿರಿಯ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾಪಂ ಅಧ್ಯಕ್ಷೆ ಧನಲಕ್ಷಿ÷್ಮÃ, ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್, ಅರಸಾಳು ಗ್ರಾಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಸುಽÃಂದ್ರ ಪೂಜಾರಿ, ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಮಣಿ, ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ಮುಖಂಡರಾದ ಆಲುವಳ್ಳಿ ವೀರೇಶ, ಗಣಪತಿ ಗವಟೂರು, ಡಿ.ಇ.ಮಧುಸೂದನ, ರವೀಂದ್ರ ಕೆರೆಹಳ್ಳಿ, ಆಸೀಫ್, ಸ್ಥಳಿಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಮ್ಮದ್ ಹುಸೇನ್, ಆರ್.ಸತೀಶ್, ಶಾಂತಕುಮಾರ್, ಪ್ರಭಾಕರಾಚಾರಿ, ಬಿ.ಆರ್.ರಮೇಶ್, ಡಿ.ಪರಮೇಶ, ಸ್ವಾತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net