

ವಿಜಯಪುರ: ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕಂಕಣಬದ್ಧರಾಗಿ ಕಾರ್ಯನಿರ್ವಹಿಸಬೇಕೆಂದು ಹಿರಿಯ ನ್ಯಾಯಾಧೀಶ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ವಿವಿಧ ಸಂ&ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ವಿಸ್ತಾರವಾಗುತ್ತಿರುವ ಅನೇಕ ರೋಗಗಳಲ್ಲಿ ಈ ಕ್ಷಯ ರೋಗವೂ ಒಂದಾಗಿದೆ ಎಂದರು.
ಕ್ಷಯ ರೋಗವು ಮೈಕ್ರೋ ಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ$್ಮಜಿವಿ (ಬ್ಯಾಕ್ಟೀರಿಯಾ) ಮೂಲಕ ಸಂಭವಿಸುವ ಅಂಟುವ್ಯಾಧಿ. ಚರ್ಮದಿಂದ ಮೆದುಳಿನವರೆಗಿನ ದೇಹದಲ್ಲಿನ ಯಾವ ಭಾಗಕ್ಕೂ ಬರುವ ರೋಗವಾಗಿದೆ. ಕ್ಷಯ ರೋಗ ವಿಶೇಷವಾಗಿ ಶ್ವಾಸಕೋಶವನ್ನು ಹೊಡೆಯುತ್ತದೆ ಎಂದು ತಿಳಿಸಿದರು.
ಕ್ಷಯರೋಗ ನಿಮೂರ್ಲನೆಗೆ ತಿಳಿವಳಿಕೆ ಅತ್ಯಗತ್ಯವಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಂತೆಯೇ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಹೇಳಿದರು.
ಡಿಎಚ್ಒ ಡಾ. ಸಂಪತ್ ಗುಣಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಜಿಲ್ಲೆಯ 211 ಗ್ರಾಪಂಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಗಳನ್ನಾಗಿ ೂಷಿಸುವ ನಿಟ್ಟಿನಲ್ಲಿ ರೂಪು ರೇಷೆಗಳನ್ನು ಹಾಕಿಕೊಂಡು ಗುರಿ ಸಾಧಿಸಲು ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಶಸಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಸದ್ಯದ ದಿನಗಳಲ್ಲಿ ಕ್ಷಯರೋಗವನ್ನು ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಕಂಡು ಹಿಡಿದು ತ್ವರಿತವಾಗಿ ಉನ್ನತ, ಗುಣಮಟ್ಟದ ಔಷಧಿಗಳನ್ನು ರೋಗಿಗಳಿಗೆ ಪೂರೈಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎನ್ಟಿಇಪಿ ಕಾರ್ಯಕ್ರಮ ಮತ್ತು ಕಾರ್ಯಕ್ರಮದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾನೀಯ ಎಂದು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಎನ್ಟಿಇಪಿ ಸಲಹೆಗಾರ ಡಾ. ಸತೀಶ ಘಾಟಗೆ ಉಪನ್ಯಾಸ ನೀಡಿದರು. ಜಿಲ್ಲೆಯ ಒಟ್ಟು 79 ಗ್ರಾಪಂಗಳು ಕ್ಷಯಮುಕ್ತ ಗ್ರಾಮ ಪಂಚಾಯಿತಿಯಾಗಿ ಆಯ್ಕೆಯಾಗಿದ್ದು, ಅದಕ್ಕಾಗಿ ಶ್ರಮಿಸಿದವರಿಗೆ ಬೆಳ್ಳಿ, ಕಂಚಿನ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಜಿಲ್ಲಾ ಕ್ಷಯರೋಗ ನಿಮೂರ್ಲನಾ ಅಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಸ್ವಾಗತಿಸಿದರು. ರವಿ ಕಿತ್ತೂರ ನಿರೂಪಿಸಿದರು. ಇಮಾಮಸಾಬ ಕಲಬುರ್ಗಿ ವಂದಿಸಿದರು.
ಜಾಥಾಗೆ ಜಿಲ್ಲಾಧಿಕಾರಿ ಚಾನೆ : ಇದಕ್ಕೂ ಮುನ್ನ ನಗರದ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಜಾಥಾಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ ನೀಡಿ ಮಾತನಾಡಿ, ಗ್ರಾಪಂ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂ ಸಂಸ್ಥೆಗಳು ಕ್ಷಯ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಜತೆಗೆ ಕೈಜೋಡಿಸಬೇಕೆಂದರು. ಕ್ಷಯ ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಪ್ರತಿ ವರ್ಷ ದೇಶದಲ್ಲಿ ಕ್ಷಯ ರೋಗದಿಂದ ಹಲವು ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದು ವಾಸಿಯಾಗುವ ರೋಗವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು. ಜಿ.ಪಂ. ಉಪಕಾರ್ಯದರ್ಶಿ ಡಾ. ವಿಜಯಕುಮಾರ ಅಜೂರ ಮತ್ತಿತರರಿದ್ದರು.