

ವಿಜಯವಾಣಿ ಸುದ್ದಿಜಾಲ ತುಮಕೂರು
ತುಮಕೂರು&-ಬೆಂಗಳೂರು ಮಾರ್ಗದ ದ್ವಿಪಥ ರೈಲ್ವೆ ಹಳಿಗಳನ್ನು ಚತುಷ್ಪಥ ಮಾರ್ಗವನ್ನಾಗಿ ಅಭಿವೃದ್ಧಿ ಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ತುಮಕೂರು-&ಯಶವಂತಪುರ ಹೊಸ ಮೆಮು ರೈಲು ಸಂಚಾರಕ್ಕೆ ಶುಕ್ರವಾರ ಹಸಿರು ನಿಶಾನೆ ತೋರಿ ಮಾತನಾಡಿ, ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿಗೆ ಬದ್ಧನಾಗಿದ್ದೇನೆ. ರಾಜ್ಯದಲ್ಲಿ ಬಾಕಿ ಉಳಿದಿರುವ, ನನೆೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಸಂಪೂರ್ಣಗೊಳಿಸುವ ಮೂಲಕ ರೈಲ್ವೆ ಕ್ರಾಂತಿ ಮಾಡುವುದಾಗಿ ತಿಳಿಸಿದರು.
ಸ್ವಯಂ ಚಾಲಿತ ಸಿಗ್ನಲ್: ತುಮಕೂರು& ಅರಸೀಕೆರೆ ನಡುವೆ ಸುಮಾರು 220 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಸ್ಥಾಪಿಸಲು ಕ್ರಮವಹಿಸಲಾಗಿದೆ. 2026ರ ಡಿಸೆಂಬರ್ ಅಥವಾ 2027ರ ಮಾರ್ಚ್ ಅಂತ್ಯದೊಳಗೆ ತುಮಕೂರು& ರಾಯದುರ್ಗ-, ತುಮಕೂರು&ದಾವಣಗೆರೆ ರೈಲ್ವೆ ಮಾರ್ಗಗಳ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಂದ ಲೋಕಾರ್ಪಣೆ ಮಾಡಿಸಲಾಗುವುದು ಎಂದು ಸೋಮಣ್ಣ ಭರವಸೆಯಿತ್ತರು.
ಬೆಂಗಳೂರಿಗೆ ಸಬ್ಅರ್ಬನ್ ರೈಲು ಸೇವೆ ಒದಗಿಸಲು ಈಗಾಗಲೇ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚೆ ಮಾಡಿದ್ದು, 2025ರೊಳಗೆ 2 ಹಂತದ ಸಬ್ ಅರ್ಬನ್ ರೈಲುಗಳನ್ನು ಲೋಕಾರ್ಪಣೆ ಮಾಡಲಾಗುವುದು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಂತೆ ಕೆಲಸ ಮಾಡಿದರೆ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಸೇರಿ ಇನ್ನಿತರ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆದುಕೊಳ್ಳುವ ಜತೆಗೆ ಅಭಿವೃದ್ಧಿ ಯೋಜನೆಗಳು ಪ್ರಗತಿ ಕಾಣಲಿವೆ ಎಂದರು.
ಮಾಜಿ ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಸಿ.ಬಿ. ಸುರೇಶ್ಬಾಬು, ಜಿ.ಬಿ. ಜ್ಯೋತಿಗಣೇಶ್, ಬಿ.ಸುರೇಶ್ಗೌಡ, ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ನೆ.ಲ.ನರೇಂದ್ರಬಾಬು, ಎಚ್. ನಿಂಗಪ್ಪ, ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಯೋಗೀಶ್ ಮೋಹನ್, ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಅನುಪ್ ದಯಾನಂದ, ಬೆಂಗಳೂರು ವಿಭಾಗ ಹೆಚ್ಚುವರಿ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಇದ್ದರು.
ರೈಲು ಸಂಚಾರ ಮಾಹಿತಿ: ಹೊಸ ಮೆಮು ರೈಲು ಭಾನುವಾರ ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 8.45ಕ್ಕೆ ತುಮಕೂರಿನಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ ಮತ್ತು ಸಂಜೆ 5.40ಕ್ಕೆ ಯಶವಂತಪುರದಿಂದ ಹೊರಟು 7.15ಕ್ಕೆ ತುಮಕೂರು ತಲುಪಲಿದೆ.
ಸ್ಕೈವಾಕ್ ನಿಮಾರ್ಣಕ್ಕೆ ಕ್ರಮ: ಅ.15ರ ಬಳಿಕ 4 ತಿಂಗಳ ಕಾಲ ತುಮಕೂರು ಲೋಕಸಭಾ ಕ್ಷೇತ್ರದ ಜನರ ಅಹವಾಲು, ಹಳ್ಳಿಗಳ ಸ್ಥಿತಿಗತಿ ಅರಿಯಲು ಪ್ರತಿ ತಾಲೂಕಿನ ಪಂಚಾಯಿತಿ ಕೇಂದ್ರ ಸ್ಥಾನಗಳಿಗೆ ಭೇಟಿ ನೀಡುತ್ತೇನೆ. ಇನ್ನೂ ನಗರದ ರೈಲ್ವೆ ನಿಲ್ದಾಣದ ಪಕ್ಕದ ರಸ್ತೆಯಲ್ಲಿ ಪ್ರಥಮ ದರ್ಜೆ ಕಾಲೇಜು, ಶಾಲೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸ್ಕೆ$ವಾಕ್ ನಿಮಾರ್ಣ ಮಾಡುವಂತೆ ಶಾಸಕರಿಂದ ಮನವಿ ಬಂದಿದೆ. ಹಾಗಾಗಿ, ಕೂಡಲೇ ಈ ಜಾಗದಲ್ಲಿ ಸ್ಕೆ$ವಾಕ್ ನಿಮಾರ್ಣ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು.
ರಾಜ್ಯ ಸರ್ಕಾರದಿಂದ ನೂರಾರು ತಪ್ಪು: ರಾಜ್ಯ ಸಿಬಿಐ ತನಿಖೆಗೆ ನೀಡಲಾಗಿದ್ದ ಮುಕ್ತ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆಯಲು ಹೊರಟಿರುವುದು ಸಿದ್ದರಾಮಯ್ಯ ಅವರ ಕಾಲ ಮೇಲೆ ಅವರೇ ಕಲ್ಲು ಹಾಕಿಕೊಳ್ಳುವಂತಾಗಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಬಿಐಗೆ ಕೊಡುವ ರಾಜ್ಯ ಸರ್ಕಾರದ ಅಧಿಕಾರವನ್ನು ತಿರಸ್ಕರಿಸಲು ಹೊರಟಿರುವುದು ಒಳ್ಳೆಯ ನಡೆಯಲ್ಲ. ಅದಕ್ಕೆ ನ್ಯಾಯಾಂಗವಿದೆ. ಇದೆಲ್ಲಾ ದಿಢೀರ್ ತೆಗೆದುಕೊಳ್ಳುವ ತೀರ್ಮಾನವಲ್ಲ. ಒಂದು ತಪು$್ಪ ಮುಚ್ಚಿಕೊಳ್ಳಲು ಹೋಗಿ ನೂರಾರು ತಪ್ಪನ್ನು ಸರ್ಕಾರ ಮಾಡುತ್ತಿದೆ. ನುರಿತ ರಾಜಕಾರಣಿ ಸಿದ್ದರಾಮಯ್ಯ ಹಠಕ್ಕೆ ಬೀಳುತ್ತಾರೆ ಅಂದರೆ ಸರಿಯಲ್ಲ. ಅವರು ಅರ್ಥ ಮಾಡಿಕೊಂಡರೆ ಒಳ್ಳೆಯದು ಅನ್ನುವುದು ನನ್ನ ಭಾವನೆ ಎಂದರು.
ನನಗೂ ತುಂಬಾ ಶತ್ರುಗಳಿದ್ದಾರೆ: ನನಗೂ ತುಂಬಾ ಶತ್ರುಗಳಿದ್ದಾರೆ, ಅದನ್ನು ತಲೆಯಲ್ಲಿ ಇಟ್ಟೊಂಡು ನನ್ನ ಅನುಭವ ಬಳಸುತ್ತೆನೆ. ಇನ್ನು 6 ತಿಂಗಳೊಳಗೆ ಎರಡು&ಮೂರು ಯೋಜನೆಗಳನ್ನು ಜಿಲ್ಲೆಗೆ ತರುತ್ತೇನೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಕ್ಷೇತ್ರದ ಚಿತ್ರಣ ಬದಲಿಸಿದ್ದಾರೆ. ಅದೇ ರೀತಿ ತುಮಕೂರು ಅಭಿವೃದ್ಧಿ ಮಾಡೋಣ ಎಂದು ಸೋಮಣ್ಣ ಹೇಳಿದರು.
ಸೋಮಣ್ಣ ಸಿಎಂ ಆಗಲಿ
ರೈಲ್ವೆ ಇಲಾಖೆಯಲ್ಲಿ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸೋಮಣ್ಣ ಹೆಜ್ಜೆ ಇಟ್ಟಿದ್ದಾರೆ. ಇನ್ನಷ್ಟು ಕೆಲಸ ಮಾಡಿ ತುಮಕೂರು ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಮಾಡುತ್ತಾರೆ. ಸೋಮಣ್ಣರಂತಹ ಕೆಲಸಗಾರ ನಾಯಕರು ಈ ರಾಜ್ಯದ ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಹೇಳಿದರು.
ನೂತನವಾಗಿ ಮೆಮು ರೈಲು ಸಂಚಾರದಿಂದ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿನ ರೈಲ್ವೆ ಕೆಳ ಸೇತುವೆ ಮತ್ತು ಮೇಲ್ಸೆತುವೆ ಕಾಮಗಾರಿಗೆ ಸುಮಾರು 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಸೋಮಣ್ಣ ಕೇಂದ್ರ ಸಚಿವರಾದ ಬಳಿಕ ನನೆಗುದಿಗೆ ಬಿದ್ದಿದ್ದ ರೈಲ್ವೆ ಯೋಜನೆಗಳಿಗೆ ವೇಗ ದೊರೆತಿದೆ.| ಜಿ.ಬಿ.ಜ್ಯೋತಿಗಣೇಶ್ ನಗರ ಶಾಸಕ
ತುಮಕೂರು: ರೈಲ್ವೆ ಇಲಾಖೆಯಲ್ಲಿ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಇರುವುದರಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಪಡೆಯಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಕೊಲ್ಹಾಪುರದಮ್ಮ ಸಮುದಾಯ ಭವನದಲ್ಲಿ ಶುಕ್ರವಾರ ಅಗ್ನಿ ಕುಲ ತಿಗಳ ಜನಾಂಗದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿ, ರೈಲ್ವೆ ಇಲಾಖೆಯಲ್ಲಿ 46 ಸಾವಿರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ಉತ್ತರಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಈಗ ಕನ್ನಡದಲ್ಲ್ಲೂ ಪರೀಕ್ಷೆ ಬರೆಯಲು ಅವಕಾಶವಿದ್ದು, ಕನ್ನಡಿಗರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ತಿಗಳ ಸಮುದಾಯದ ಜತೆ ಅವಿನಾಭಾವ ಸಂಬಂಧವಿದೆ. 45 ವರ್ಷಗಳ ಹಿಂದೆ ನಾವು ಬೆಂಗಳೂರಿಗೆ ಬಂದಾಗ ಆಶ್ರಯ ನೀಡಿದವರು ಇದೇ ಸಮಾಜದವರು. ಸ್ವಾಭಿಮಾನ, ಸಂಸ್ಕಾರಕ್ಕೆ ತಿಗಳ ಸಮಾಜ ಮತ್ತೊಂದು ಹೆಸರು. ಶ್ರಮಜೀವಿಗಳಾದ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ರೈಲ್ವೆ ಇಲಾಖೆಯ ಉದ್ಯೋಗ ಪಡೆಯಲು ಮಕ್ಕಳನ್ನು ಪ್ರೇರೇಪಿಸಬೇಕು. ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಅನುಕೂಲಗಳನ್ನು ಸಮಾಜಕ್ಕೆ ಒದಗಿಸಲು ಬದ್ಧ ಎಂದರು.
ತಿಗಳ ಸಮಾಜದವರು ಭೂಮಿಯನ್ನು ನಂಬಿ ಬದುಕುತ್ತಿರುವವರು. ಸಚಿವ ಸೋಮಣ್ಣ ಜಿಲ್ಲೆಗೆ ಉತ್ತಮ ಕೆಲಸ ಮಾಡುತ್ತಿದ್ದು, ಸಹಕಾರ ನೀಡಿ ಅವರಿಗೆ ಇನ್ನಷ್ಟು ಶಕ್ತಿ ತುಂಬಬೇಕು ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ಹೇಳಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಎಷ್ಟೇ ಒತ್ತಡ ಬಂದರೂ ಸೋಮಣ್ಣ ಅವರನ್ನೇ ಬೆಂಬಲಿಸಿದ ತಿಗಳ ಸಮಾಜದ ಸಹಕಾರ ಮರೆಯಲಾಗದು. ಈ ಸಮಾಜದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ತಿಗಳ ಸಮಾಜದ ಟಿ.ಎಲ್. ಕುಂಭಯ್ಯ, ಹನುಮಂತರಾಜು, ಯೋಗಾ ನಂದಕುಮಾರ್, ಕೃಷ್ಣಪ್ಪ, ಕುಂಭಯ್ಯ, ಕುಂಭಿನರಸಯ್ಯ, ಗಂಗಹನುಮಯ್ಯ, ಜೆಡಿಎಸ್ ಮುಖಂಡ ಗುಬ್ಬಿ ನಾಗರಾಜು, ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ಕುಮಾರ್, ನಗರ ಪಾಲಿಕೆ ಮಾಜಿ ಉಪಮೇಯರ್ ನರಸಿಂಹಮೂರ್ತಿ ಇದ್ದರು.