

ಹುಬ್ಬಳ್ಳಿ : ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಸದಾಕಾಲ ಚಿಂತನೆ ಮಾಡುತ್ತ, ಹತ್ತು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾಗಿ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿದರು.
ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿಗಿದ್ದ ಧಾರವಾಡ ಲೋಕಸಭಾ ಚುನಾವಣಾ ಪ್ರಚಾರಾರ್ಥ ಕೋಳಿವಾಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಮುಖಂಡರ ಸಮಾವೇಶದಲ್ಲಿ ಅವರು ಮಾತನಾಡಿದರು.
ಕಳಸಾ -ಬಂಡೂರಿ ವಿಷಯದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದ್ದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಯೋಜನೆಯನ್ನು ಅಭಿವೃದ್ಧಿಪಡಿಸಿ ಕಾಲುವೆಗಳನ್ನು ತೋಡಿದ್ದು ಹಣಕಾಸಿನ ನೆರವು ನೀಡಿದೆ. ಈ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಅನುದಾನ ಮೀಸಲಿಡದೆ, ಈ ಭಾಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.
ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಮುಖಂಡ ಷಣ್ಮುಖ ಗುರಿಕಾರ ಮಾತನಾಡಿದರು. ಮಾಜಿ ಶಾಸಕ ಡಾ. ಆರ್.ಬಿ. ಶಿರಿಯನ್ನವರ, ಮೃತ್ಯುಂಜಯ ಹಿರೇಮಠ, ಮಲ್ಲಿಕಾರ್ಜುನ ಹೊರಕೇರಿ, ದೇವರಾಜ ಧಾಡಿಬಾವಿ, ಶಾಂತಯ್ಯ ಹೊಸಮಠ, ವಿರೂಪಾಕ್ಷಗೌಡ ಭರಂ ಗೌಡ್ರು, ಶಶಿಧರ ತೆಂಗಿನಕಾಯಿ, ಚೈತ್ರಾ ಶಿರೂರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.