ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಬದ್ಧ

4KMD-1
Published on

ಕೆ.ಎಂ.ದೊಡ್ಡಿ: ಮದ್ದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಾಲನಿಗಳಿಗೆ ಮೂಲ ಸೌಕರ್ಯ ಕಲ್ಪಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮದ್ದೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರದಿಂದ ಸುಮಾರು 1300 ಕೋಟಿ ರೂ.ಗೂ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿಪಡಿಸಲಾಗುತ್ತಿದ್ದು, ಕ್ಷೇತ್ರದಲ್ಲಿನ ಸರ್ವ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಹಾಗೂ ಸಮುದಾಯಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನಗಳನ್ನು ತಂದು ಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಶಾಸಕರು ತಿಳಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಮಸಮಾಜದ ಪರಿಕಲ್ಪನೆ ದೃಷ್ಟಿಯಿಂದ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಭಾರತಿನಗರ ಬ್ಲಾಕ್ ಎಸ್ಸಿ, ಎಸ್ಟಿ ವಿಭಾಗದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ದೇವಾನಂದ್, ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಸೋಮನಹಳ್ಳಿ ರಾಜೇಂದ್ರ, ಮುಖಂಡರಾದ ಶಿವಲಿಂಗಯ್ಯ, ಜಾಣಪ್ಪ, ಸಿದ್ದರಾಜು, ವೀರಭದ್ರಯ್ಯ, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net