

ಮಂಡ್ಯ: ಜಿಲ್ಲೆಯ ದುಡಿಮೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗಾಗಿ ಮಾ.3ರಂದು ನಗರದಲ್ಲಿ ಶ್ರಮಜೀವಿಗಳ ಸಮಾವೇಶ ಆಯೋಜಿಸಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು.
ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಅಂದು ಬೆಳಗ್ಗೆ 11.30ಕ್ಕೆ ಸಮಾವೇಶದಲ್ಲಿ ರಾಜ್ಯಸಭಾ ಮಾಜಿ ಸದಸ್ಯೆ ಬೃಂದಾ ಕಾರಟ್ ಪ್ರಧಾನ ಭಾಷಣ ಮಾಡಲಿದ್ದಾರೆ. ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ದಸಂಸ ಮುಖಂಡ ಗುರುಪ್ರಸಾದ್ ಕೆರಗೋಡು, ಮುಸ್ಲಿಂ ಸೌಹಾರ್ದ ಒಕ್ಕೂಟದ ಇಲಿಯಾಸ್ ಅಹಮದ್‌ಖಾನ್, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜು ಮಾತನಾಡಲಿದ್ದಾರೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಿಪಿಐಎಂ ಕಾರ್ಯದರ್ಶಿ ದೇವಿ ಮಾತನಾಡಿ, ಜಿಲ್ಲೆಯಲ್ಲಿ ಕೋಮು ದಳ್ಳೂರಿ ಪಸರಿಸುವ ಮೂಲಕ ಹಸಿವು ಮತ್ತು ನಿರುದ್ಯೋಗದ ಬಗ್ಗೆ ಚರ್ಚಿಸಲು ಹಿಂದೇಟು ಹಾಕುತ್ತಿರುವ ಕೇಂದ್ರ ಸರ್ಕಾರ ಧೋರಣೆ ಖಂಡಿಸಲು ಸಮಾವೇಶ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ವಿವಿಧ ಸಂಘಟನೆಯ ಎಂ.ಪುಟ್ಟಮಾದು, ಸಿ.ಕುಮಾರಿ, ಎನ್.ಎಲ್.ಭರತ್‌ರಾಜ್ ಇದ್ದರು.