ಚುಂಚಶ್ರೀ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಿ: ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಮನವಿ

Communist Party of India Press Conference Mandya
Published on

ಮಂಡ್ಯ: ನಾಗಮಂಗಲದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಮತ್ತೆ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಮನವಿ ಮಾಡಿದರು.

ಅಂದಿನ ಗಲಾಟೆಯಲ್ಲಿ ಗುಪ್ತಚರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಇದಲ್ಲದೆ ಜೆಡಿಎಸ್ ಜತೆಗಿನ ಬಿಜೆಪಿ ಮೈತ್ರಿಯನ್ನು ದುರುಪಯೋಗಪಡಿಸಿಕೊಂಡು ಸಂಘ ಪರಿವಾರದವರ ಸಂಚು ಇದೆ. ಆದ್ದರಿಂದ ಘಟನೆ ಸಂಬಂಧ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆ ಮಾಡಿಸಬೇಕೆಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಘಟನೆ ಬಳಿಕ ಸಿಪಿಐಎಂ ಪಕ್ಷದ ನಿಯೋಗ ನಾಗಮಂಗಲಕ್ಕೆ ಭೇಟಿ ನೀಡಿ ಸಾರ್ವಜನಿಕರ ಜೊತೆ ಮಾತನಾಡಿದಾಗ ಹಲವು ಅಂಶಗಳು ಬೆಳಕಿಗೆ ಬಂದಿದೆ. ಮಾತ್ರವಲ್ಲದೆ ಕಂದಾಯ ಇಲಾಖೆ ವರದಿ ಪ್ರಕಾರ ಸುಮಾರು 25 ಕೋಟಿ ರೂ ನಷ್ಟವಾಗಿದೆ ಎನ್ನಲಾಗುತ್ತಿದೆ. ಕೆಲ ಕುಟುಂಬದ ಬೀದಿಗೆ ಬಿದ್ದಿವೆ. ಈ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿರುವ ಎಲ್ಲರಿಗೂ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸಿಪಿಐಎಂ ಕಾರ್ಯಕಾರಿ ಮಂಡಳಿ ಸದಸ್ಯೆ ಸಿ.ಕುಮಾರಿ, ಜಿಲ್ಲಾ ಸಮಿತಿ ಸದಸ್ಯರಾದ ಆರ್.ಕೃಷ್ಣ, ಬಿ.ಹನುಮೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net