ಸಮುದಾಯ ಜಾಗೃತಿ ಆದ್ಯತೆ

ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎನ್‌ಡಿಆರ್‌ಎಫ್‌ನಿಂದ ವಿಪತ್ತು ನಿರ್ವಹಣೆಯ ಕಲ್ಪಿತ ಪ್ರದರ್ಶನ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ನೀಲಮ್ಮ, ಉಪಾಧ್ಯಕ್ಷ ರಾಮಚಂದ್ರಗೌಡ, ಎನ್‌ಡಿಆರ್‌ಎಫ್ ತಂಡದ ಎಎಸ್‌ಐ ಸೋಮ್ ಬಿರ್ ಕುಮಾರ್, ಕಂದಾಯ ನಿರೀಕ್ಷಕ ಹನುಮಂತಪ್ಪ, ಸಿಬ್ಬಂದಿ ಇತರರಿದ್ದರು.

Published on

ಕನಕಗಿರಿ: ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ತೆರಳಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಅಜಯಕುಮಾರ್ ಹೇಳಿದರು.

ತಾಲೂಕಿನ ಚಿಕ್ಕಡಂಕನಕಲ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಬುಧವಾರ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆಯ ಕಲ್ಪಿತ ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಅದರಿಂದಾಗುವ ಅನಾಹುತ, ಅನಿಲ ಸೋರಿಕೆ ತಡೆಗಟ್ಟುವಿಕೆ, ಅಗ್ನಿ ಅವಘಡ, ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದ ಅನಾಹುತಗಳಾದಾಗ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು.

ತಾಪಂ (ಗ್ರಾಮೀಣ ಮತ್ತು ಉದ್ಯೋಗ) ಸಹಾಯಕ ನಿರ್ದೇಶಕಿ ಶರಪೊನ್ನಿಸಾ ಬೇಗಂ, ಗ್ರಾಪಂ ಅಧ್ಯಕ್ಷೆ ನೀಲಮ್ಮ, ಉಪಾಧ್ಯಕ್ಷ ರಾಮಚಂದ್ರಗೌಡ, ಪಿಡಿಒ ನಾಗಪ್ಪ, ಎನ್‌ಡಿಆರ್‌ಎಫ್ ತಂಡದ ಎಎಸ್‌ಐ ಸೋಮ್ ಬಿರ್ ಕುಮಾರ್, ಕಂದಾಯ ನಿರೀಕ್ಷಕ ಹನುಮಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net