ಸಮುದಾಯದ ಅಭಿವೃದ್ಧಿಗೆ ಶ್ರಮಿಸಿ

11 GKK-1-Web
ಗೋಕಾಕ ತಾಪಂ ಸಭಾಭವನದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಸವರಾಜ ಹೆಗ್ಗನಾಯಕ ಮಾತನಾಡಿದರು. ಸುಧೀರ ಜೋಡಟ್ಟಿ, ಯಲ್ಲಪ್ಪ ನಾಯಿಕ, ಮಹಾನಂದಾ ಬೆಳಗಲಿ ಇದ್ದರು.
Published on

ಗೋಕಾಕ: ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಸಮುದಾಯದ ಜನರ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ತಾಪಂ ಇಒ ಬಸವರಾಜ ಹೆಗ್ಗನಾಯಕ ಸೂಚನೆ ನೀಡಿದರು.

ತಾಪಂ ಸಭಾಭವನದಲ್ಲಿ ಬುಧವಾರ ಎಸ್‌ಸಿಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವಿ. ಕಲ್ಲಪ್ಪನವರ ಮಾತನಾಡಿ, ವಿವಿಧ ಇಲಾಖೆಯಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿ ಹಲವು ಕಾಮಗಾರಿಗಳು ಇದ್ದು, ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು. ಎಸ್‌ಸಿಪಿ, ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಸುಧೀರ ಜೋಡಟ್ಟಿ, ಯಲ್ಲಪ್ಪ ನಾಯಿಕ, ಮಹಾನಂದಾ ಬೆಳಗಲಿ, ಪರಿಶಿಷ್ಟ ಕಲ್ಯಾಣ ಇಲಾಖೆ ಅಧಿಕಾರಿ ಜಯಶ್ರೀ ಗೋಟೂರೆ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಉಪತಹಸೀಲ್ದಾರ್ ಎಲ್.ಎಚ್.ಭೋವಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net