ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ

20Ravig-5-Web
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ನದಾಫ್, ಪಿಂಜಾರ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದರು. ಮಹ್ಮದ್‌ರಫೀ ಪಿಂಜಾರ, ಅಪ್ಪಾಲಾಲ ನದಾಫ್, ಎನ್.ಐ. ನದಾಫ್, ಬಾಬುಸಾಬ್ ಅಂಕಲಗಿ, ಹುಸೇನ್ ನದಾಫ್, ಮಕ್ತುಂಸಾಬ್ ನದಾಫ್ ಇತರರು ಇದ್ದರು.
Published on

ಬೆಳಗಾವಿ: ರಾಜ್ಯದಲ್ಲಿರುವ ನದಾಫ್ ಹಾಗೂ ಪಿಂಜಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನದಾಫ್, ಪಿಂಚಾರ ಸಂಘದ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ನಜೀರಹ್ಮದ್ ಶೇಖ್ ಮಾತನಾಡಿ, ನದಾಫ್, ಪಿಂಜಾರ ಜನಾಂಗವು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರವು ಪ್ರತ್ಯೇಕ ನಿಗಮ ಮಂಡಳಿ ರಚಿಸುವ ಅವಶ್ಯಕತೆ ಇದೆ. ಈ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಲೇ ಇದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಮುದಾಯದ ಈ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಬುಧವಾರ ಒಂದು ದಿನದ ಸಾಂಕೇತಿಕ ಧರಣಿ ನಡೆಸುತ್ತಿದ್ದೇವೆ. ತಕ್ಷಣ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಇನ್ನೂ ತೀವ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹ್ಮದ್‌ರಫೀ ಪಿಂಜಾರ, ಖಜಾಂಚಿ ಅಪ್ಪಾಲಾಲ ನದಾಫ್, ಎನ್.ಐ. ನದಾಫ್, ಬಾಬುಸಾಬ್ ಅಂಕಲಗಿ, ಹುಸೇನ್ ನದಾಫ್, ಮಕ್ತುಂಸಾಬ್ ನದಾಫ್, ಹಜರತ್‌ಸಾಬ್ ನದಾಫ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net