ರಕ್ತದಾನ ಮಾಡಲು ಆಸಕ್ತಿ ತೋರಿಸಿ

Untitled design(14)
ಕುರುಗೋಡು ತಾಲೂಕಿನ ಬೈಲೂರು ಗ್ರಾಮದಲ್ಲಿ ಕೋಳೂರು ಸಮುದಾಯ ಆರೋಗ್ಯ ಕೇಂದ್ರದಿಂದ ರಕ್ತದಾನ ಶಿಬಿರ ನಡೆಯಿತು. ಗ್ರಾಪಂ ಅಧ್ಯಕ್ಷ ವೆಂಕಟೇಶ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಮಲ್ಲಪ್ಪ, ವೈದ್ಯರಾದ ಶರಣಮ್ಮ, ಕರಿಬಸವ, ಪ್ರಮುಖರಾದ ಅಯ್ಯಪ್ಪ, ಶಿವಪ್ಪ, ಕೆ.ಪಂಪಾಪತಿ ಇದ್ದರು.
Published on

ಕುರುಗೋಡು: ರಕ್ತದಾನದಿಂದ ಅನೇಕರ ಜೀವ ಉಳಿಸುವ ಜತೆಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ವೆಂಕಟೇಶ ಹೇಳಿದರು.

ಬೈಲೂರು ಗ್ರಾಮದ ಈಶ್ವರ ಆಲಯದ ಆವರಣದಲ್ಲಿ ಗುರುವಾರ ಕೋಳೂರು ಸಮುದಾಯ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ಅದನ್ನು ಮನುಷ್ಯರಿಂದಲೇ ಪಡೆಯಬೇಕು. ಅದಕ್ಕೆ ಜನರು ಹೆಚ್ಚೆಚ್ಚು ರಕ್ತದಾನ ಮಾಡಲು ಮುಂದೆ ಬರುವುದರ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಮಲ್ಲಪ್ಪ ಮಾತನಾಡಿ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವಷರ್ 41 ದಶಲಕ್ಷ ಯೂನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದೆ ಎಂದರು. ವೈದ್ಯರಾದ ಶರಣಮ್ಮ, ಕರಿಬಸವ, ಪ್ರಮುಖರಾದ ಅಯ್ಯಪ್ಪ, ಶಿವಪ್ಪ, ಕೆ ಪಂಪಾಪತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net