ಆಸ್ಪತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಿ

Published on

ಅರಕೇರಾ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಕರವೇ ಪದಾಧಿಕಾರಿಗಳು ಉಪತಹಸೀಲ್ದಾರ್ ಮನೋಹರ ನಾಯಕಗೆ ಸೋಮವಾರ ಮನವಿ ಸಲ್ಲಿಸಿದರು.

ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ

ಪಟ್ಟಣದ ಸುತ್ತಲೂ 40ಕ್ಕೂ ಹೆಚ್ಚು ದೊಡ್ಡಿ, ತಾಂಡಗಳು ಬರುತ್ತವೆ. ಕಳೆದ ಸರ್ಕಾರದ ಅವಧಿಯಲ್ಲಿ ನೂತನ ತಾಲೂಕು ಕೇಂದ್ರವಾಗಿ ಅಧಿಕೃತವಾಗಿ ಪಟ್ಟಣವನ್ನು ಘೋಷಣೆ ಮಾಡಲಾಗಿತ್ತು. ಆದರೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ನುರಿತ ವೈದ್ಯರನ್ನು ನೇಮಿಸಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಒತ್ತಾಯಿಸಿದರು.

ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಚಿಕಿತ್ಸೆಗಾಗಿ ವೈದ್ಯರು ಸಮರ್ಪಕವಾಗಿ ಸಿಗುತ್ತಿಲ್ಲ. ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಸಣ್ಣ ಕಾಯಿಲೆಗಳಿಗೆ ಚಿಕಿತ್ಸೆ ಗೆ ನೀಡಲು ಆಸ್ಪತ್ರೆ ಸಿಮೀತವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ಹಾಗೂ ದೇವದುರ್ಗವನ್ನು ಅವಲಂಬಿಸಬೇಕಿದೆ. ತುರ್ತು ಸಂದರ್ಭದಲ್ಲಿ ದೂರದ ಪ್ರಯಾಣ ರೋಗಿಗಳಿಗೆ ತೆರಳಲು ಕಷ್ಟದಾಯಕವಾಗಿದೆ. ಜತೆಗೆ ಪ್ರಯೋಗಾಲಯ, ಗರ್ಭಿಣಿಯರಿಗೆ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಬೇಕು. ಆಸ್ಪತ್ರೆಯಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಬೇಕು. ಕರ್ತವ್ಯ ಲೋಪಎಸಗಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net