

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಕರ್ನಾಟಕದಲ್ಲಿ ಪ್ರಥಮವಾಗಿ ಅನುಷ್ಠಾನವಾಗುತ್ತಿರುವ ಸಮುದಾಯ ಉಪಶಮನ ಆರೈಕೆ ಕೇಂದ್ರ ಯಶಸ್ವಿಯಾಗಿ ಮುನ್ನಡೆಯಲಿ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಸ್ಪಂದಿಸುವುದು ಅಗತ್ಯ ಎಂದು ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.
ವಂಡ್ಸೆ ಸಮುದಾಯ ಉಪಶಮನ ಆರೈಕೆ ಕೇಂದ್ರ, ನಿರಾಮಯ ಸೊಸೈಟಿ ವತಿಯಿಂದ ಆರು ಮಂದಿ ಸಿಬ್ಬಂದಿ, ನಾಲ್ವರು ವೈದ್ಯಾಧಿಕಾರಿಗಳು, 9 ಮಂದಿ ಸಿಎಚ್ಒಗಳಿಗೆ ವಂಡ್ಸೆಯ ನಿರಾಮಯ ಸೊಸೈಟಿಯಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ನಿರಾಮಯ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ, ನಿರಾಮಯ ಸೊಸೈಟಿ ಗೌರವ ಸದಸ್ಯರಾದ ಡಾ.ಅತುಲ್ಕುಮಾರ್ ಶೆಟ್ಟಿ, ಡಾ.ರಾಜೇಶ ಬಾಯರಿ ಚಿತ್ತೂರು, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ನ ಸತ್ಯಶ್ರೀ, ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾಪಂ ಅಧ್ಯಕ್ಷ ರವಿರಾಜ್ ಶೆಟ್ಟಿ, ಆಲೂರು ಗ್ರಾಪಂ ಅಧ್ಯಕ್ಷ ರಾಜೇಶ ದೇವಾಡಿಗ, ಹಕ್ಲಾಡಿ ಗ್ರಾಪಂ ಉಪಾಧ್ಯಕ್ಷ ಸುಭಾಷ್ ಶೆಟ್ಟಿ, ವಂಡ್ಸೆ ಗ್ರಾಪಂ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಇಡೂರು ಕುಂಜ್ಞಾಡಿ ಗ್ರಾಪಂ ಉಪಾಧ್ಯಕ್ಷ ಅರುಣ್ಕುಮಾರ್ ಶೆಟ್ಟಿ, ಚಿತ್ತೂರು ಗ್ರಾಪಂ ಉಪಾಧ್ಯಕ್ಷೆ ಸುಬ್ಬು, ತರಬೇತುದಾರರಾದ ಡಾ.ಶಿಥಲ್ ರಾಜ್, ಡಾ.ಅರ್ಜುನ್, ಶೈನಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಉಪಸ್ಥಿತರಿದ್ದರು. ನಿರಾಮಯ ಸೊಸೈಟಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಪ್ರತಾಪ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಈಗಾಗಲೇ ಕೇರಳದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಸಮುದಾಯ ಉಪಶಮನ ಆರೈಕೆ ಕೇಂದ್ರ ಕರ್ನಾಟಕದಲ್ಲಿ ಪೈಲಟ್ ಪ್ರಾಜೆಕ್ಟ್ ಆಗಿ ವಂಡ್ಸೆಯಲ್ಲಿ ಅನುಷ್ಠಾನವಾಗುತ್ತಿದೆ. ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ, ಕೆರಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದು, ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯ ಸೇವೆಯೊಂದಿಗೆ ಈ ಭಾಗಕ್ಕೆ ಅಗತ್ಯವಾದ ಶವ ಶೀತಲೀಕರಣ ಘಟಕವನ್ನು ದಾನಿಗಳ ಮೂಲಕ ಪಡೆದು ಮನೆಯಲ್ಲಿಯೇ ಶವವನ್ನು ಅಂತ್ಯಸಂಸ್ಕಾರದ ತನಕ ಸಂರಕ್ಷಿಸಿಡಲು ಉಚಿತವಾಗಿ ನೀಡುವ ವ್ಯವಸ್ಥೆ ಮಾಡುವ ಯೋಜನೆ ರೂಪಿಸಿದ್ದೇವೆ. -ಉದಯಕುಮಾರ್ ಶೆಟ್ಟಿ, ನಿರಾಮಯ ಸೊಸೈಟಿ ಅಧ್ಯಕ್ಷ https://www.vijayavani.net/excellent-work-with-the-help-of-donors https://www.vijayavani.net/science-conference-at-koteshwar-public-school