ಅಭಿವೃದ್ಧಿ ಸಾಧಿಸಲು ಸಮುದಾಯದ ಪಾಲ್ಗೊಳ್ಳುವಿಕೆ ಮುಖ್ಯ: ಪಿ.ಶಿವರಾಜು

DSC_1424
Published on

ಮೈಸೂರು: ಪ್ರತಿಯೊಂದು ಸಮುದಾಯವು ಅಭಿವೃದ್ಧಿ ಸಾಧಿಸಲು ಸಮುದಾಯದ ಪಾಲ್ಗೊಳ್ಳುವಿಕೆ ಮುಖ್ಯ. ಶಿಕ್ಷಣ ಸಂಘಟನೆ ಹೋರಾಟವು ಸಮುದಾಯದ ಬೆಳವಣಿಗೆಯಲ್ಲಿ ಕೊಡುಗೆ ನೀಡುತ್ತದೆ ಎಂದು ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಪಿ.ಶಿವರಾಜು ಹೇಳಿದರು.

ಅಗ್ರಹಾರದ ರಾಜೇಂದ್ರ ಭವನದಲ್ಲಿ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮೈಸೂರು ಜಿಲ್ಲಾ ಘಟಕವು ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಶಿವರಾತ್ರಿ ರಾಜೇಂದ್ರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದ ಅವರು, ಶಿಕ್ಷಿತರು ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ವೀರಶೈವ ಲಿಂಗಾಯತ ಸಮುದಾಯವು ಸಂಘಟನೆಯಲ್ಲಿ ಹಿಂದಿದೆ. ಸಮುದಾಯದ ಕಾರ್ಯಕ್ರಮಗಳಿಗೆ ಅಧಿಕಾರಿಗಳನ್ನು ಆಹ್ವಾನಿಸಿದಾಗ ಬರಲು ಹಿಂಜರಿಯುತ್ತಾರೆ. ಸಮುದಾಯದಲ್ಲಿ ಗುರುತಿಸಿಕೊಂಡ ಮೇಲೆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ತಪ್ಪೇನು? ಇಂಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬಹುದು ಎಂದು ಪ್ರತಿಪಾದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net